ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಈ ವರ್ಷ 139 ಮಂದಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ

ಅರ್ಧಕ್ಕಿಂತ ಹೆಚ್ಚಿನ ಪ್ರಕರಣ ಗೋಹತ್ಯೆಗೆ ಸಂಬಂಧಿಸಿದ್ದು

ವರದಿಗಾರ (ಸೆ.11): ಉತ್ತರಪ್ರದೇಶದ ಬಹ್ರೈಚ್‌ನಲ್ಲಿ ಸೆಪ್ಟೆಂಬರ್ 6 ರಂದು ಗೋಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ -ಎನ್‌ಎಸ್‌ಎಯಡಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕಠಿಣ ಕಾಯ್ದೆಯಡಿ ಪ್ರಕರಣ ದಾಖಲಿಸಲ್ಪಟ್ಟ ಪಟ್ಟಿಗೆ ಇದು ಹೊಸ ಸೇರ್ಪಡೆಯಾಗಿದೆ. ಎನ್ ಎಸ್ಎಯಡಿ ಪ್ರಕರಣ ದಾಖಲಿಸಿದ ಅರ್ಧಕ್ಕಿಂತ ಹೆಚ್ಚಿನ ಜನರು ಗೋ ಹತ್ಯೆಗೆ ಸಂಬಂಧಿಸಿದವರಾಗಿದ್ದಾರೆ.

ಈ ವರ್ಷ ಆಗಸ್ಟ್ 19 ರವರೆಗೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ 139 ಜನರ ವಿರುದ್ಧ ಎನ್‌ಎಸ್‌ಎಯಡಿ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 76 ಮಂದಿ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾದವರು. ಆಗಸ್ಟ್ 31ರ ವೇಳೆಗೆ ಬರೇಲ್ವಿ ಪೊಲೀಸ್ ವಲಯವೊಂದರಲ್ಲೇ 44 ಮಂದಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ಕೇವಲ ಆರು ಮಂದಿಯ ವಿರುದ್ಧ, 2020 ರಲ್ಲಿ 37 ಅಪರಾಧಗಳಿಗೆ ಮತ್ತು 20 ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಪೊಲೀಸರು ಎನ್‌ಎಸ್‌ಎ ದಾಖಲಿಸಿದ್ದಾರೆ. ಇತರ 13 ಪ್ರಕರಣ, ಈ ವರ್ಷದ ಆರಂಭದಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದ್ದಾಗಿವೆ.

ಎನ್ಎಸ್ಎ ಅಡಿಯಡಿ, ಒಬ್ಬ ವ್ಯಕ್ತಿ ರಾಷ್ಟ್ರೀಯ ಭದ್ರತೆ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಬೆದರಿಕೆ ಎಂದು ಅಧಿಕಾರಿಗಳು ಭಾವಿಸಿದರೆ 12 ತಿಂಗಳವರೆಗೆ ಯಾವುದೇ ಆರೋಪವಿಲ್ಲದೆ ಬಂಧಿಸಿ ಜೈಲಿಗಟ್ಟಬಹುದು.

ಎನ್‌ಎಸ್‌ಎ ಪ್ರಕರಣ ಹೊರತುಪಡಿಸಿ, ಈ ವರ್ಷ ಆಗಸ್ಟ್ 26 ರವರೆಗೆ 1,716 ಪ್ರಕರಣಗಳನ್ನು ಉತ್ತರ ಪ್ರದೇಶ ಹಸುವಿನ ವಧೆ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದು, 4,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ವಿಫಲವಾದ ಕಾರಣಕ್ಕೆ ಈ ಪೈಕಿ 32 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ.

ಇದಲ್ಲದೆ, ಪೊಲೀಸರು ಯುಪಿ ದರೋಡೆಕೋರರ ಕಾಯ್ದೆಯಡಿ 2,384 ಮಂದಿಯ ವಿರುದ್ಧ ಹಾಗೂ ಗೂಂಡಾ ಕಾಯ್ದೆಯನ್ನು 1,742 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group