ರಾಷ್ಟ್ರೀಯ ಸುದ್ದಿ

ಶಾಂತಿಯ ಪ್ರತಿಪಾದಕ, ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ನಿಧನ

Swami Agnivesh

ವರದಿಗಾರ (ಸೆ.11) : ಆರ್ಯ ಸಮಾಜ ನಾಯಕ, ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪಿತ್ತ ಜನಕಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿ ಇನಿಸ್ಟಿಟ್ಯೂಟ್ ಆಫ್ ಲಿವರ್ ಬಿಲಿಯರಿ ಸೈನ್ಸ್ (ಐ ಎಲ್ ಬಿ ಎಸ್) ನಲ್ಲಿ ಮಂಗಳವಾರದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಪ್ರಮುಖ ಅಂಗಾಂಗಗಳ ವೈಫಲ್ಯದಿಂದಾಗಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆಗೆ ಒಳಗಾಗಿದ್ದ ಅಗ್ನಿವೇಶ್ ಅವರ ಆರೋಗ್ಯ ಪರಿಸ್ಥಿತಿ ತೀವ್ರ ವಿಷಮಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 6.30 ಗಂಟೆಗೆ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಸ್ವಾಮಿ ಅಗ್ನಿವೇಶ್ ಹಿಂದೆ ಆರ್ಯ ಸಭಾ ಹೆಸರಿನಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿ ಹರಿಯಾಣದಿಂದ ವಿಧಾನಸಭೆಗೆ ಚುನಾಯಿತರಾಗಿದ್ದರು. ಆರ್ಯ ಸಮಾಜ ಸಿದ್ಧಾಂತಗಳಿಗೆ ಅನುಗುಣವಾಗಿ ಅವರು ಅರ್ಯಸಭಾ ರಾಜಕೀಯ ಪಕ್ಷವನ್ನು ನಡೆಸುತ್ತಿದ್ದರು. ಅವಿಭಜಿತ ಆಂಧ್ರಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಮಾತುಕತೆಯಲ್ಲಿ ಅವರು ಮಧ್ಯಸ್ಥಿಕೆ ವಹಿಸಿದ್ದರು. ಅನೇಕ ವಿಷಯಗಳಲ್ಲಿ ವಿವಿಧ ಧರ್ಮಗಳ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸಿದರು. ಅಗ್ನಿವೇಶ್ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group