ರಾಜ್ಯ ಸುದ್ದಿ

ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ ಐ ಆರ್

Zameer Ahmed Khan

ಆರೋಪ ಸಾಬೀತಾದರೆ ಎಲ್ಲಾ ಆಸ್ತಿ ಸರ್ಕಾರಕ್ಕೆ ಬರೆದುಕೊಡುವುದಾಗಿ ಪ್ರಕಟಿಸಿದ ಜಮೀರ್

ವರದಿಗಾರ (ಸೆ.11): ಡ್ರಗ್ಸ್ ವಿಚಾರದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಆರೋಪ ಮಾಡಿದ್ದ ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಪ್ರಶಾಂತ್ ಸಂಬರಗಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಶಾಸಕ ಜಮೀರ್ ಅಹ್ಮದ್ ಅವರಿಗೂ ಕೊಲಂಬೋದ ಕ್ಯಾಸಿನೊ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಶೇಕ್ ಫಾಜಿಲ್ ನಂಟಿದೆ ಹಾಗೂ ನಟಿ ಸಂಜನಾ ಗಲ್ರಾನಿ ಮತ್ತು ಜಮೀರ್ ಅವರಿಗೂ ನಂಟಿದೆ ಎಂದು ಪ್ರಶಾಂತ್ ಸಂಬರಗಿ ಆರೋಪಿಸಿದ್ದರು. ಇದರ ವಿರುದ್ಧ ಜಮೀರ್ ಅಹ್ಮದ್ ದೂರು ದಾಖಲಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಶನಿವಾರ ಬೆಳಗ್ಗೆ 10. 30ಕ್ಕೆ ವಿಚಾರಣೆಗೆ ಹಾಜರಾಗಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಮಾಹಿತಿ ನೀಡುವಂತೆ ಪ್ರಶಾಂತ್ ಸಂಬರಗಿಯವರಿಗೆ ಸಿಸಿಬಿ ನೋಟಿಸ್ ನೀಡಿದೆ. ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ತಮ್ಮ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದ್ದು, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಟಿ ಸಂಜನಾರನ್ನು ಶ್ರೀಲಂಕಾದಲ್ಲಿ ಅಲ್ಲ ತಾವು ಬೆಂಗಳೂರಿನಲ್ಲಿಯೇ ನೋಡಿಲ್ಲ. ರಾಜಕೀಯದಲ್ಲಿರುವ ತಮ್ಮ ವಿರುದ್ಧ ಸುಳ್ಳು ಆರೋಪಗಳು, ಚಾರಿತ್ರ್ಯಹರಣದ ಪ್ರಯತ್ನಗಳು ನಡೆಯುತ್ತಿರುವುದು ಇದು ಹೊಸತೇನಲ್ಲ. ಇಂತಹವುಗಳನ್ನೆಲ್ಲಾ ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದು, ತಾವು ಏನು ಎಂಬುದು ತಮ್ಮನ್ನು ನಂಬಿರುವ ಜನ ಮತ್ತು ತಮ್ಮ ಆತ್ಮಸಾಕ್ಷಿಗೆ ಗೊತ್ತಿದೆ ಎಂದರು.

ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ತಮ್ಮ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದು, ಒಂದು ವೇಳೆ ಆರೋಪಗಳು ಸುಳ್ಳೆಂದು ಕಂಡುಬಂದರೆ, ನಿಜ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೊಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group