ವರದಿಗಾರ (ಸೆ.12): ದೇಶದಲ್ಲಿ ಕೊರೊನಾ ನಾಗಾಲೋಟ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 97,570 ಕೊರೊನಾ ಸೋಂಕು ಪತ್ತೆಯಾಗಿದೆ. ಒದರೊಂದಿಗೆ ಸೋಂಕಿತರ ಸಂಖ್ಯೆ 46 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 46,59,985 ಕೊರೊನಾ ಪ್ರಕರಣಗಳಿದ್ದು, ಈ ಪೈಕಿ 9,58,316 ಸಕ್ರಿಯ ಪ್ರಕರಗಳಿವೆ. ಇದುವರೆಗೆ 36,24,197 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ 1201 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 77,472ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.
