ರಾಷ್ಟ್ರೀಯ ಸುದ್ದಿ

ಸ್ವಾಮಿ ಅಗ್ನಿವೇಶ್ ವಿರುದ್ಧ ಮಾಜಿ ಐಪಿಎಸ್ ಅಧಿಕಾರಿಯಿಂದ ಅವಹೇಳನಕಾರಿ ಟ್ವೀಟ್: ಪೊಲೀಸ್ ಫೌಂಡೇಶನ್ ಆಫ್ ಇಂಡಿಯಾ ಆಕ್ರೋಶ

ವರದಿಗಾರ (ಸೆ.12): ಆರ್ಯ ಸಮಾಜದ ನಾಯಕ, ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರ ನಿಧನಕ್ಕೆ ಹಲವಾರು ಮಂದಿ ಪ್ರಮುಖರು ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ದಾಂಜಲಿ ಸಲ್ಲಿಸಿದ್ದರೆ, ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದಾರೆ.

“ಸ್ವಾಮಿ ಅಗ್ನಿವೇಶ್ ನೀವು ಕಾವಿ ವಸ್ತ್ರಧರಿಸಿದ ಹಿಂದೂ ವಿರೋಧಿ, ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಉಂಟುಮಾಡಿದ್ದೀರಿ. ನೀವೊಬ್ಬ ಬ್ರಾಹ್ಮಣನಾಗಿ ಜನಿಸಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ನೀವು ಗೋಮುಖ ವ್ಯಾಘ್ರ. ನಿಮ್ಮನ್ನು ಕರೆಸಿಕೊಳ್ಳಲು ಆ ಯಮಧರ್ಮ ಇಷ್ಟು ವಿಳಂಬ ಮಾಡಿರುವುದಕ್ಕೆ ನನಗೆ ತೀವ್ರ ಬೇಸರವಾಗಿದೆ” ಎಂದು ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಗಳ ಬಗ್ಗೆ ಪೊಲೀಸರು ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಹೇಳಿಕೆ ನೀಡುವುದು ಅತ್ಯಂತ ನೋವುಂಟು ಮಾಡಿದ್ದು, ಮಾನವ ಕುಲ ನಾಚಿಕೆಪಟ್ಟುಕೊಳ್ಳುವಂತದ್ದು ಎಂದಿದ್ದಾರೆ.

ಪೊಲೀಸ್ ಫೌಂಡೇಶನ್ ಆಫ್ ಇಂಡಿಯಾ ಕೂಡಾ, ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದೆ. ನಿವೃತ್ತರಾದ ಐಪಿಎಸ್ ಅಧಿಕಾರಿಯೊಬ್ಬ ಇಂತಹ ದ್ವೇಷಪೂರಿತ ಸಂದೇಶ ಟ್ವೀಟ್ ಮಾಡಿ, ಆತ ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group