ರಾಷ್ಟ್ರೀಯ ಸುದ್ದಿ

ದೆಹಲಿ ಗಲಭೆ: ದೋಷಾರೋಪ ಪಟ್ಟಿಯಲ್ಲಿ ಯೆಚೂರಿ, ಜಯತಿ ಘೋಷ್, ಅಪೂರ್ವಾನಂದ, ರಾಹುಲ್ ರಾಯ್ ಹೆಸರು ಸೇರ್ಪಡೆ

(L-R) Jayati Ghosh, Apoorvanand, Sitaram Yechury, Rahul Roy and Yogendra Yadav.

ಪೂರಕ ಚಾರ್ಜ್ ಶೀಟ್ ನಲ್ಲಿ ಗಣ್ಯ ವ್ಯಕ್ತಿಗಳ ಹೆಸರು ಸೇರ್ಪಡೆ

ವರದಿಗಾರ (ಸೆ.12): ಇದೇ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಅರ್ಥಶಾಸ್ತ್ರಜ್ಞ ಜಯತಿ ಘೋಷ್, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಸಾಮಾಜಿಕ ಕಾರ್ಯಕರ್ತ ಅಪೂರ್ವಾನಂದ್ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ರಾಹುಲ್ ರಾಯ್ ಅವರನ್ನು ಸಹ-ಸಂಚುಕೋರರನ್ನಾಗಿ ಮಾಡಿ ದೆಹಲಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೆಸರು ಸೇರಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಕಾರರು, ಪ್ರತಿಭಟನೆ ತೀವ್ರಗೊಳಿಸುವಂತೆ ಕರೆ ನೀಡಿದ್ದರು. ಸಿಎಎ, ಎನ್ ಆರ್ ಸಿ” ಮುಸ್ಲಿಂ ವಿರೋಧಿ” ಎಂದು ಕರೆಯುವ ಮೂಲಕ ಸಮುದಾಯದಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಮಾತ್ರವಲ್ಲ ಕೇಂದ್ರ ಸರ್ಕಾರದ ವರ್ಚಸ್ಸನ್ನು ಕುಂದಿಸಲು ಪ್ರತಿಭಟನೆಗಳನ್ನು ಆಯೋಜಿಸಿದ್ದಾರೆ ಎಂದು ಇವರ ವಿರುದ್ಧ ಆರೋಪ ಹೊರಿಸಲಾಗಿದೆ.

ಫೆಬ್ರವರಿ 23 ಮತ್ತು 26ರ ನಡುವೆ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಪೊಲೀಸರು ಸಲ್ಲಿಸಿದ ಪೂರಕ ಚಾರ್ಜ್‌ಶೀಟ್‌ನಲ್ಲಿ ಈ ನಾಯಕರ ಹೆಸರು ಸೇರಿಸಲಾಗಿದೆ. ದೆಹಲಿ ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿ, 581 ಮಂದಿ ಗಾಯಗೊಂಡಿದ್ದರು. ಅವರಲ್ಲಿ 97 ಮಂದಿ ಗುಂಡೇಟಿನಿಂದ ಗಾಯಗೊಂಡವರಾಗಿದ್ದಾರೆ.

ಮಹಿಳಾ ಸಂಘ ಪಿಂಜ್ರಾ ತೋಡ್ ಸದಸ್ಯೆ ಮತ್ತು ಜೆಎನ್‌ಯು ವಿದ್ಯಾರ್ಥಿಗಳಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್, ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಗುಲ್ಫಿಷಾ ಫಾತಿಮಾ ಎಂಬ ಮೂವರು ವಿದ್ಯಾರ್ಥಿಗಳ ತಪ್ಪೊಪ್ಪಿಗೆಯನ್ನು ಆಧರಿಸಿ ಈ ಗಣ್ಯ ವ್ಯಕ್ತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ವಿರುದ್ಧ ಕ್ರೂರ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗುವ ಎರಡು ದಿನಗಳ ಮೊದಲು ಸಾರ್ವಜನಿಕವಾಗಿ ಈ ದೋಷಾರೋಪ ಪಟ್ಟಿ ಪ್ರಕಟಗೊಂಡಿದೆ. ಕಲಿತಾ ಮತ್ತು ನರ್ವಾಲ್ ಅವರು ಗಲಭೆಯಲ್ಲಿ ತಮ್ಮ ಪಿತೂರಿ ಇಲ್ಲ, ಆದರೆ ಘೋಷ್, ಅಪೂರ್ವಾನಂದ್ ಮತ್ತು ರಾಯ್ ಅವರ ಸೂಚನೆ ಮೇರೆಗೆ ಪ್ರತಿಭಟನೆ ನಡೆಸಿರುವುದಾಗಿ ಹೇಳಿದ್ದಾರೆ. ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ಹೇಳಿದ್ದರು ಎಂದು ವಿದ್ಯಾರ್ಥಿಗಳು ಹೇಳಿರುವುದಾಗಿ ದೆಹಲಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 22, 2020ರಂದು ಘೋಷ್, ಅಪೂರ್ವಾನಂದ್ ಅವರ ಆದೇಶದ ಮೇರೆಗೆ ಧರಿಯಾಗಂಜ್ ಮತ್ತು ಜಫ್ರಾಬಾದ್ ಚಕ್ಕ ಜಾಮ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜೆಎನ್ ಯುನ ಇಬ್ಬರು ವಿದ್ಯಾರ್ಥಿಗಳು ಕೂಡ ಹೇಳಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಸಿಎಎ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ಪಿಂಜ್ರಾ ಟಾಡ್ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಜಾಮಿಯಾ ಸಮನ್ವಯ ಸಮಿತಿಯವರು ಸಮನ್ವಯಕಾರರಾಗಿ ಸಹಾಯ ಮಾಡಿದ್ದರು ಎಂದು ವಿದ್ಯಾರ್ಥಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group