ರಾಷ್ಟ್ರೀಯ ಸುದ್ದಿ

ಬಿಜೆಪಿ ನಾಯಕರ ದ್ವೇಷಪೂರಿತ ಭಾಷಣ, ಪೋಸ್ಟ್; ಫೇಸ್ ಬುಕ್ ಮುಖ್ಯಾಧಿಕಾರಿಗೆ ದೆಹಲಿ ವಿಧಾನಸಭೆಯಿಂದ ಸಮನ್ಸ್  

Facebook

ವರದಿಗಾರ (ಸೆ.12): ಭಾರತದಲ್ಲಿ ಫೇಸ್‌ಬುಕ್‌ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಅವರಿಗೆ ದೆಹಲಿ ವಿಧಾನಸಭೆಯ ಶಾಂತಿ ಭದ್ರತೆ ಸಮಿತಿ ಸಮನ್ಸ್ ಕಳುಹಿಸಿದೆ.

ಬಿಜೆಪಿ ನಾಯಕರ ದ್ವೇಷ ಪೂರಿತ ಭಾಷಣ, ಆಕ್ಷೇಪಾರ್ಹ ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಆಡಳಿತ ನೋಡಿಯೂ ನೋಡದಂತೆ ವರ್ತಿಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ವಿಧಾನಸಭೆ ಈ ಕ್ರಮಕ್ಕೆ ಮುಂದಾಗಿದೆ.

ಸೆಪ್ಟೆಂಬರ್ 15 ರಂದು ವಿಧಾನಸಭಾ ಆವರಣದಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆಮ್ ಆದ್ಮಿ ಪಕ್ಷದ ನಾಯಕ, ರಾಜೇಂದ್ರನಗರ ಶಾಸಕ ರಾಘವ್ ನೇತೃತ್ವದ ಸಮಿತಿ ನೋಟಿಸ್ ನೀಡಿದೆ. ಹಲವು ಜನರಿಂದ ಸಂಗ್ರಹಿಸಲಾದ ಸಾಕ್ಷ್ಯಗಳ ಆಧಾರದ ಮೇಲೆ ಫೇಸ್‌ಬುಕ್‌ಗೆ ನೋಟಿಸ್ ನೀಡಲಾಗಿದೆ ಎಂದು ಸಮಿತಿ ಶನಿವಾರ ಹೇಳಿಕೆ ನೀಡಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group