ರಾಷ್ಟ್ರೀಯ ಸುದ್ದಿ

ಪ್ರಧಾನಿ ವಿರುದ್ಧ ಟೀಕೆ: ಉತ್ತರ ಪ್ರದೇಶದ ವಾರಾಣಸಿಯ ಇಂಜಿನಿಯರ್ ಅಮಾನತು

ವರದಿಗಾರ (ಸೆ.13): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಮತ್ತು ಫೇಸ್ ಬುಕ್ ವಿಷಯದಲ್ಲಿ ಸರ್ಕಾರದ ನೀತಿಯನ್ನು ಟೀಕಿಸಿದ್ದ ಉತ್ತರ ಪ್ರದೇಶದ ವಾರಾಣಸಿಯ ಜೂನಿಯರ್ ಇಂಜಿನಿಯರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ವಾರಾಣಸಿಯ ನಲ್ಕೂಪ್ ವಿಭಾಗದಲ್ಲಿ ನಿಯೋಜನೆಗೊಂಡಿದ್ದ ತಾಂತ್ರಿಕ ವಿಭಾಗದ ಜೂನಿಯರ್ ಇಂಜಿನಿಯರ್ ಪ್ರವೀಣ್ ಕುಮಾರ್ ಅಮಾನತುಗೊಂಡ ಅಧಿಕಾರಿ. ಅವಹೇಳನಕಾರಿ ಭಾಷೆ ಬಳಸಿ ಪ್ರಧಾನ ಮಂತ್ರಿಯ ವಿರುದ್ಧ ತಮ್ಮ ಫೇಸ್‌ಬುಕ್ ಪೇಜ್ ನಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ಮಾತ್ರವಲ್ಲ ತಮ್ಮನ್ನು ಭವಿಷ್ಯದ ಶಾಸಕ ಎಂಬಂತೆ ಬಿಂಬಿಸಿಕೊಳ್ಳುವ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ ಎಂದು ಇಲ್ಲಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾತ್ರವಲ್ಲ ಪ್ರವೀಣ್ ಕುಮಾರ್, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರದ ನೀತಿಗಳನ್ನು ಟೀಕಿಸಿದ್ದರು ಮತ್ತು ಆಗಸ್ಟ್ 26ರಿಂದ ಯಾವುದೇ ಮಾಹಿತಿ ನೀಡದೆ ಕೆಲಸಕ್ಕೆ ಗೈರು ಹಾಜರಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group