ರಾಷ್ಟ್ರೀಯ ಸುದ್ದಿ

ಉತ್ತರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ: ಪ್ರಿಯಾಂಕಾ ಗಾಂಧಿ

Priyanka Gandhi

ವರದಿಗಾರ (ಸೆ.13) ಉತ್ತರ ಪ್ರದೇಶದ ಪ್ರತಿ ಜಿಲ್ಲೆಯಲ್ಲೂ ಕೊರೊನಾ-ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಕೊರೊನಾ ಬಂದು ದೇಶಾದ್ಯಂತ ಲಕ್ಷಾಂತರ ಜನರ ಜೀವನ ದುಸ್ತರವಾದಾಗ ಮತ್ತು ಇಡೀ ದೇಶ ಸಂಕಷ್ಟದಲ್ಲಿರುವಾಗ, ರಾಜ್ಯ ಸರ್ಕಾರದ ಅಧಿಕಾರಿಗಳು ಹಣ ಲೂಟಿಯಲ್ಲಿ ತೊಡಗಿದ್ದಾರೆ. ತಪ್ಪು ಮಾಡಿದವರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುವುದು ಆಶ್ಚರ್ಯ ಉಂಟು ಮಾಡಿದೆ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಪ್ರಿಯಾಂಕಾ ಗಾಂಧಿ ವಾದ್ರಾ, ” ಕೊರೊನಾ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಮೀಸಲಾದ ಯೋಜನೆಗಳಲ್ಲಿ, ಭತ್ಯೆಗಳನ್ನು ಕಡಿತಗೊಳಿಸುವ ಬಿಜೆಪಿ ಸರ್ಕಾರವು ಹಗರಣದಲ್ಲಿ ತೊಡಗಿದೆ. ಇದರ ಫಲಿತಾಂಶವೆಂಬಂತೆ ಕೊರೋನಾ ಕಿಟ್ ಹಗರಣ ಉತ್ತರ ಪ್ರದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ನಡೆಯುತ್ತಿದೆ. ವಂಚಕರನ್ನು ರಕ್ಷಿಸುವ ಪ್ರಯತ್ನವನ್ನು ಸರ್ಕಾರ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ಈ ಮಧ್ಯೆ, ಹಗರಣದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಮುಖೇಶ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಕೆಲವು ಪ್ರತಿಭಟನಕಾರರು ಪಿಪಿಇ ಕಿಟ್‌ಗಳನ್ನು ಧರಿಸಿ ಸಾರ್ವಜನಿಕರ ಗಮನ ಸೆಳೆದರು. ಸರ್ಕಾರ ವಿರೋಧಿ ಘೋಷಣೆಗಳನ್ನು ಕೂಗಿ ವಿಧಾನ ಸೌಧದ ಎದುರು ಕಪ್ಪು ಧ್ವಜಗಳನ್ನು ಪ್ರದರ್ಶಿಸಿದರು. ತಕ್ಷಣ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.

ಪ್ರಿಯಾಂಕಾ ಮತ್ತೊಂದು ಟ್ವೀಟ್ ಮಾಡಿ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಸರ್ಕಾರಿ ಕೆಲಸಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಪ್ರಸ್ತಾಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಯುವಕರ ಹಕ್ಕುಗಳನ್ನು ಕಸಿಯುವ ಪ್ರಯತ್ನ, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group