ರಾಷ್ಟ್ರೀಯ ಸುದ್ದಿ

ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದ ಪತ್ರಕರ್ತನ ಮೇಲೆ ಹಲ್ಲೆ

Attack on Journalist

ಮುಖ್ಯಮಂತ್ರಿಯವರು ಮಾಧ್ಯಮದ ವಿರುದ್ಧ ಬೆದರಿಕೆ ಹಾಕಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ 12 ಗಂಟೆಗಳಲ್ಲೇ ಪತ್ರಕರ್ತನ ಮೇಲೆ ಹಲ್ಲೆ!

ವರದಿಗಾರ (ಸೆ.14): ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರು ಪತ್ರಕರ್ತರ ವಿರುದ್ಧ ಫೇಸ್ ಬುಕ್ ನಲ್ಲಿ ಎಚ್ಚರಿಕೆಯ ರೀತಿಯಲ್ಲಿ ಪೋಸ್ಟ್ ಹಾಕಿದ್ದ ಕೆಲವೇ ಗಂಟೆಗಳಲ್ಲಿ ತ್ರಿಪುರಾದ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕು ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಪತ್ರಕರ್ತ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹಲ್ಲೆಯ ಹಿಂದೆ ಬಿಜೆಪಿ ಕಾರ್ಯಕರ್ತರಿದ್ದಾರೆ ಎಂದು ಹಲ್ಲೆಗೊಳಗಾದ ಪತ್ರಕರ್ತ ಪರಶರ್ ಬಿಸ್ವಾಸ್ ಆರೋಪಿಸಿದ್ದಾರೆ. ಅವರು ತ್ರಿಪುರಾದ ಬಂಗಾಳಿ ಡೈಲಿ ಪತ್ರಿಕೆಯ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದರು. ಮುಖ್ಯಮಂತ್ರಿಯವರು ಇತ್ತೀಚೆಗೆ ಪತ್ರಕರ್ತರನ್ನು ಬೆದರಿಸುವ ರೀತಿಯಲ್ಲಿ ಮಾತನಾಡಿದ್ದನ್ನು ಬಿಸ್ವಾಸ್ ಟೀಕಿಸಿ ಶುಕ್ರವಾರ ರಾತ್ರಿ ಕೊರೊನಾ ಕೇರ್ ಸೆಂಟರ್ ನಿಂದಲೇ ವೀಡಿಯೋ ಮಾಡಿದ್ದರು.

ಶನಿವಾರ ರಾತ್ರಿ ಧಲಾಯಿ ಜಿಲ್ಲೆಯ ಅಂಬಸ್ಸಾ ಎಂಬಲ್ಲಿರುವ ತನ್ನ ಮನೆಯಲ್ಲಿದ್ದಾಗ ದುಷ್ಕರ್ಮಿಗಳ ತಂಡ ಅವರ ಮೇಲೆ ದಾಳಿ ನಡೆಸಿದೆ. ಗಾಯಗೊಂಡ ಅವರನ್ನು ರಾಜಧಾನಿ ಅಗರ್ತಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳ ತಿಳಿಸಿವೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಜಿಪಿ ರಾಜೀವ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿಯವರು ಮಾಧ್ಯಮದ ವಿರುದ್ಧ ಬೆದರಿಕೆ ಹಾಕಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ 12 ಗಂಟೆಗಳಲ್ಲೇ ಈ ದಾಳಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಈ ದಾಳಿ ನಡೆಸಿರುವ ಶಂಕೆ ಇದೆ ಎಂದು ಸ್ಯಾಂದನ್ ಪತ್ರಿಕೆಯ ಸಂಪಾದಕ ಸುಬಲ್ ದೇ ಆರೋಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group