ರಾಷ್ಟ್ರೀಯ ಸುದ್ದಿ

ಹಲ್ಲೆ ಮಾಡುವವರು ಪಕ್ಷವನ್ನು ಕೇಳಿ ಮಾಡುವುದಿಲ್ಲ: ಸಂಜಯ್ ರಾವತ್

Sanjay Raut

“ಉತ್ತರ ಪ್ರದೇಶದಲ್ಲಿ ಎಷ್ಟು ಮಾಜಿ ಸೈನಿಕರ ಮೇಲೆ ಹಲ್ಲೆಯಾಗಿದೆ? ಆಗ ರಕ್ಷಣಾ ಸಚಿವರು ಕರೆ ಮಾಡಿ ವಿಚಾರಿಸಿಲ್ಲ?”

ವರದಿಗಾರ (ಸೆ.14): ಮುಂಬೈಯಲ್ಲಿ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆಗೊಳಗಾದ ನಿವೃತ್ತ ನೌಕಾಪಡೆ ಅಧಿಕಾರಿ ಮದನ್ ಶರ್ಮಾ ಅವರ ಬಗ್ಗೆ ಕನಿಕರ ವ್ಯಕ್ತಪಡಿಸಿರುವ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಹಲ್ಲೆಕೋರರು ಘಟನೆಯ ಮೊದಲು ಪಕ್ಷವನ್ನು ಕೇಳಿಲ್ಲ ಎಂದು ಹೇಳಿದ್ದಾರೆ.

“ನಾವು ಕೋವಿಡ್ -19 ಸೋಂಕಿನ ವಿರುದ್ಧ ಹೋರಾಡಬೇಕಾಗಿದೆ. ದುರದೃಷ್ಟವಶಾತ್, ಕೆಲವು ರಾಜಕೀಯ ಪಕ್ಷಗಳು ತಮ್ಮ ಪಟ್ಟಭದ್ರ ಹಿತಾಸಕ್ತಿಗಾಗಿ ರಾಜಕೀಯ ಮಾಡುವುದರಲ್ಲಿ ನಿರತವಾಗಿವೆ. ಅವರು ನಿವೃತ್ತ ನೌಕಾಪಡೆಯ ಅಧಿಕಾರಿ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ವಿಷಯದಲ್ಲಿ ತುಂಬಾ ಆಸಕ್ತಿ ವಹಿಸುತ್ತಿದ್ದಾರೆ. ನೀವು ಏನಾದರೂ ಮಾತನಾಡುವಾಗ ಮತ್ತು ಗಣ್ಯ ವ್ಯಕ್ತಿಗಳ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ಮಾಡಿದಾಗ ಜನರು ಇದರ ಮೇಲೆ ಕೋಪಗೊಳ್ಳುತ್ತಾರೆ, ಅದಕ್ಕೆ ನೀವು ಸರ್ಕಾರವನ್ನು ಏಕೆ ಹೊಣೆಗಾರರನ್ನಾಗಿಸುತ್ತೀರಿ ಎಂದು ರಾವತ್ ಪ್ರಶ್ನಿಸಿದ್ದಾರೆ.

ಯಾರಾದರೂ ಹಲ್ಲೆ ಮಾಡಿದರೆ, ಅವರು ನಮ್ಮನ್ನು ಕೇಳಿ ಮಾಡುವುದಿಲ್ಲ. ಮಹಾರಾಷ್ಟ್ರ ಒಂದು ದೊಡ್ಡ ರಾಜ್ಯ. ಈ ರೀತಿಯ ಯಾರಿಗಾದರೂ ಆಗಬಹುದು. ಉತ್ತರ ಪ್ರದೇಶದಲ್ಲಿ ಎಷ್ಟು ಮಾಜಿ ಸೈನಿಕರ ಮೇಲೆ ಹಲ್ಲೆಯಾಗಿದೆ ಎಂದು ನಿಮಗೆ ತಿಳಿದಿದೆಯೇ? ಆದರೆ, ಆಗ ರಕ್ಷಣಾ ಸಚಿವರು ಅವರಲ್ಲಿ ಯಾರೊಬ್ಬರಿಗೂ ಕರೆ ಮಾಡಿ ವಿಚಾರಿಸಲಿಲ್ಲ. ಯಾವುದೇ ಮುಗ್ಧ ವ್ಯಕ್ತಿಯ ಮೇಲೆ ಹಲ್ಲೆ ಮಾಡಬಾರದು ಎಂಬುದು ನಮ್ಮ ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಶಿವಸೇನೆ ಮುಖಂಡ ರಾವತ್ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

“ಹಲ್ಲೆಗೊಳಗಾದ ವ್ಯಕ್ತಿಯ ಬಗ್ಗೆ ನನಗೆ ಸಹಾನುಭೂತಿ ಇದೆ. ನಾನು ಇದರ ವಿರುದ್ಧ ಪ್ರತಿಭಟಿಸುತ್ತೇನೆ. ಮಹಾರಾಷ್ಟ್ರದಲ್ಲಿ ಕಾನೂನಿನ ನಿಯಮವಿದೆ ಮತ್ತು ಆರೋಪಿಗಳನ್ನು ತಕ್ಷಣವೇ ಬಂಧಿಸಲಾಗಿದೆ. ಪಕ್ಷದ ಸಂಬಂಧವನ್ನೂ ಲೆಕ್ಕಿಸದೆ ಆರೋಪಿಗಳು ಯಾರು ಎಂದು ನೋಡದೆ ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ ನಂತರ ಈವರೆಗೆ ಆರು ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನಂತರ ಆರು ಮಂದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

“ನಾವು ಕಂಗನಾ ರಾಣಾವತ್ ವಿಷಯದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇವೆ. ಆದರೆ ಈ ವಿಷಯದಲ್ಲಿ ನಡೆಯುತ್ತಿರುವ ಪ್ರತಿಯೊಂದು ಪ್ರಕ್ರಿಯೆಯನ್ನು, ಯಾರೆಲ್ಲಾ ಈ ವಿಷಯದಲ್ಲಿ ಭಾಗವಹಿಸುತ್ತಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಮ್ಮ ರಾಜ್ಯದ ಬಗ್ಗೆ ಯಾವ ವ್ಯಕ್ತಿಗಳು, ಯಾವ ರಾಜಕೀಯ ಪಕ್ಷಗಳು ಯಾವ ರೀತಿ ಚಿಂತಿಸುತ್ತಿವೆ ಎಂಬುದನ್ನೂ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಸಂಜಯ್ ರಾವತ್ ಸೂಚ್ಯವಾಗಿ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group