ರಾಷ್ಟ್ರೀಯ ಸುದ್ದಿ

ದೆಹಲಿ ಗಲಭೆಗೆ ಸಂಚು ಆರೋಪ: ಯುಎಪಿಎಯಡಿ ಉಮರ್ ಖಾಲಿದ್ ಬಂಧನ

Umar Khalid

ರಾಷ್ಟ್ರದ್ರೋಹ ಆರೋಪದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವ ಮೊದಲೇ ಮತ್ತೊಮ್ಮೆ ಬಂಧನ

ವರದಿಗಾರ (ಸೆ.14): ಈಶಾನ್ಯ ದಹೆಲಿಯಲ್ಲಿ ಫೆಬ್ರವರಿ ತಿಂಗಳಲ್ಲಿ 50 ಮಂದಿಯ ಸಾವಿಗೆ ಕಾರಣವಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸಂಚು ರೂಪಿಸಿದ್ದ ಆರೋಪದಲ್ಲಿ ದೆಹಲಿ ಪೊಲೀಸ್ ನ ವಿಶೇಷ ಸೆಲ್ ಭಾನುವಾರ ರಾತ್ರಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಿ, ಕ್ರೂರವಾದ, ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ-ಯುಎಪಿಎಯಡಿ ಪ್ರಕರಣ ದಾಖಲಿಸಿದೆ.

ಖಾಲಿದ್, ‘ಯುನೈಟೆಡ್ ಎಗೇನ್ಸ್ಟ್ ಹೇಟ್’ ಗುಂಪು ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರನ್ನು ಭೇಟಿಯಾದ ಬಗ್ಗೆ ವಿಚಾರಣೆ ವೇಳೆ ಮಾಹಿತಿ ದೊರೆತಿದೆ. ಮಾತ್ರವಲ್ಲ ಗಲಭೆಯ ಸಂದರ್ಭದಲ್ಲಿ ಖಾಲಿದ್ ಅವರ ಚಲನವಲನಗಳು ಸೇರಿದಂತೆ “ನಿರ್ಣಾಯಕ ಪುರಾವೆಗಳು” ದೊರೆತಿವೆ ಎಂದು ಪೊಲೀಸರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಈಗಾಗಲೇ ದೇಶದ್ರೋಹ ಆರೋಪ ಎದುರಿಸುತ್ತಿರುವ ಖಾಲಿದ್ ಅವರನ್ನು ಇಂದು ಅಂದರೆ, ಸೋಮವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group