ಪತ್ರಿಕಾ ಪ್ರಕಟಣೆ

ಉಮರ್ ಖಾಲಿದ್ ಬಂಧನ; ವೆಲ್ಫೇರ್ ಪಾರ್ಟಿ ಖಂಡನೆ

Umar Khalid

ಬೆಂಗಳೂರು: ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರವರ ಬಂಧನವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷರಾದ ಅಡ್ವಕೇಟ್ ತಾಹಿರ್ ಹುಸೇನ್ ತೀವ್ರವಾಗಿ ಖಂಡಿಸಿದ್ದಾರೆ.

ಉಮರ್ ಖಾಲಿದ್ ಬಂಧನವು ದೇಶದ ಜಾತ್ಯಾತೀತೆಯ ಮೇಲೆ ಮತ್ತೊಂದು ಕಳಂಕವಾಗಿದೆ. ಕೇಂದ್ರ ಸರ್ಕಾರ ಅಭಿಪ್ರಾಯ ಭೇದ ಹಾಗೂ ಮುಕ್ತ ವಿಚಾರಗಳ ಬೇಟೆ ನಡೆಸುತ್ತಿದೆ. ಆ ಮೂಲಕ CAA ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಮಾಯಕ ಜನರನ್ನು ಮತ್ತು ವಿದ್ಯಾರ್ಥಿ ಕಾರ್ಯಕರ್ತರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ತಾಹಿರ್ ಹುಸೇನ್ ಆರೋಪಿಸಿದ್ದಾರೆ.

CAA ವಿರುದ್ಧ ಪ್ರತಿಭಟಿಸುವುದು ಜನರ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಪ್ರಜಾಪ್ರಭುತ್ವದ ಹಕ್ಕು ಎಂಬುದನ್ನು ಸರ್ಕಾರ ಮರೆಯಬಾರದು. ಪ್ರಮುಖವಾಗಿ ಗಲಭೆಯನ್ನು ಹುಟ್ಟಿಹಾಕಿದ ಕಪಿಲ್ ಮಿಶ್ರ ವಿರುದ್ಧ ದಿಲ್ಲಿ ಪೊಲೀಸ್ ಈವರೆಗೆ ಕ್ರಮ ಜರುಗಿಸಿಲ್ಲ ಬದಲಾಗಿ ಶಾಂತಿಯುತವಾಗಿ ಪ್ರತಿಭಟಿಸಿದ ಸಿಎಎ ವಿರೋಧಿಸಿ ಪ್ರತಿಭಟನಾಕಾರರನ್ನು ಬೇಟೆ ಮಾಡಲಾಗುತ್ತಿದೆ ಸಿಎಎ ವಿರೋಧ ಹೋರಾಟಗಾರರಿಗೆ ಗಲಭೆ ಸಂಚು ಹಣೆದರದ ಬಿಂಬಿಸಲು ಪೊಲೀಸರು ಯತ್ನಿಸಿದ್ದಾರೆ. ಉಮರ್ ಖಾಲಿದ್ ಸೇರಿದಂತೆ ಎಲ್ಲಾ ಅಮಾಯಕ ಕಾರ್ಯಕರ್ತರನ್ನು ಬೇಷರತ್ತಾಗಿ ಮತ್ತು ನಷ್ಟ ಪರಿಹಾರದೊಂದಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತವರ ರಾಜಕೀಯ ನೇತಾರರನ್ನು ಹೊಣೆಗಾರರನ್ನಾಗಿ ಮಾಡಬೇಕು ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group