ವರದಿಗಾರ (ಸೆ.14): ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್ ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇಂದು ಕರ್ಕರ್ಡ್ರೂಮ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಮೂರ್ತಿ ಅಮಿತಾಬ್ ರಾವತ್ 10 ದಿನಗಳ ಕಾಲ ಖಾಲಿದ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದರು.
ಖಾಲಿದ್ ವಿರುದ್ಧ ಕಾನೂನುಬಾಹಿರ ತಡೆ ಕಾಯ್ದೆ-ಯುಎಪಿಎ, ದೇಶದ್ರೋಹ, ಕೊಲೆ, ಕೊಲೆಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಅವರನ್ನು ಬಂಧಿಸಲಾಗಿತ್ತು.
