ರಾಜ್ಯ ಸುದ್ದಿ

ಬಹುಕೋಟಿ ಐಎಂಎ ವಂಚನೆ ಪ್ರಕರಣ; ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಕೆಲವು ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ಅನುಮತಿ

ವರದಿಗಾರ (ಸೆ.14): ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ರಾಜ್ಯಪಾಲರು ಹಾಗೂ ಗೃಹ ಇಲಾಖೆ ಅನುಮತಿ ನೀಡಿದೆ.

ಐಎಂಎ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಮುಖ್ಯಸ್ಥ ಮುಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಸಾರ್ವಜನಿಕರಿಂದ ಹೆಚ್ಚಿನ ಲಾಭಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡಿದ್ದ. ಸುಮಾರು 4000 ಸಾವಿರ ಕೋಟಿ ಹಣ ಪಡೆದ ಬಳಿಕ ದುಬೈಗೆ ಪರಾರಿಯಾಗಿದ್ದ. ಈ ಬಗ್ಗೆ ಮೊದಲು ಬೆಂಗಳೂರಿನ ಕಮರ್ಷಿ ಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಎಸ್ ಐಟಿ, ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು.

ದುಬೈಯಿಂದ ಆಗಮಿಸಿದ ಮನ್ಸೂರ್ ಖಾನ್ ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಹಲವು ರಾಜಕಾರಣಿಗಳು, ಅಧಿಕಾರಿಗಳು ತಮ್ಮಿಂದ ಹಣ ಪಡೆದಿರುವುದಾಗಿ ಹೇಳಿದ್ದ. ಅವರಲ್ಲಿ ಪ್ರಮುಖವಾಗಿ ಹೇಮಂತ್ ನಿಬಾಂಳ್ಕರ್ ,ಅಜಯ್ ಹಿಲೋರಿ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್, ಪಿಎಸ್ ಐ ಗೌರಿ ಶಂಕರ್, ಐಡಿ ಡಿವೈಎಸ್ಪಿ ಶ್ರೀಧರ್ ಹೆಸರು ಹೇಳಿದ್ದಾನೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಸಿಬಿಐಗೆ ಅನುಮತಿ ನೀಡಿದೆ. ಹಲವು ದಿನಗಳಿಂದ ಪ್ರಾಸಿಕ್ಯೂಷನ್ ಗೆ ಸಿಬಿಐ ಅಧಿಕಾರಿಗಳು ಅನುಮತಿ ಕೇಳುತ್ತಲೇ ಬಂದಿದ್ದರು. ಇಂದು ಕೊನೆಗೂ ರಾಜ್ಯಪಾಲರು ಹಾಗೂ ರಾಜ್ಯದ ಗೃಹ ಇಲಾಖೆಯಿಂದ ಆರೋಪಿತರ ಸ್ಥಾನದಲ್ಲಿರುವ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಸಿಬಿಐಗೆ ಅನುಮತಿ ನೀಡಲಾಗಿದೆ.
ಆರೋಪಿ ಸ್ಥಾನದಲ್ಲಿರುವ ಹೇಮಂತ್ ನಿಬಾಂಳ್ಕರ್, ಅಜಯ್ ಹಿಲೋರಿ, ರಮೇಶ್, ಗೌರಿ ಶಂಕರ್, ಶ್ರೀಧರ್ ಅವರನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group