ರಾಷ್ಟ್ರೀಯ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬ್ಯಾಂಕ್ ವಂಚನೆವೆಸಗಿ 38 ಮಂದಿ ವಿದೇಶಕ್ಕೆ ಪರಾರಿ: ಸಂಸತ್ತಿಗೆ ಸರ್ಕಾರದ ಮಾಹಿತಿ

ವರದಿಗಾರ (ಸೆ.15): ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಆರೋಪಿಗಳಾದ 38 ಮಂದಿ 2015 ರ ಜನವರಿಯಿಂದ ಭಾರತದಿಂದ ಪರಾರಿಯಾಗಿದ್ದಾರೆ ಎಂದು ಸರ್ಕಾರ ನಿನ್ನೆ ಸಂಸತ್ತಿಗೆ ತಿಳಿಸಿದೆ.

ಸಂಸದ ಡೀನ್ ಕುರಿಯಾಕೋಸ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್” 1.1.2015 ರಿಂದ 31.12.2019 ರ ಅವಧಿಯಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ನಡೆದ ಆರ್ಥಿಕ ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಪ್ರಕರಣಗಳಲ್ಲಿ ಆರೋಪಿಗಳಾಗಿರುವ 38 ಜನರು ಪರಾರಿಯಾಗಿದ್ದಾರೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತಿಳಿಸಿದೆ ಎಂದು ಮಾಹಿತಿ ನೀಡಿದರು.

ಜಾರಿ ನಿರ್ದೇಶನಾಲಯವು 20 ಜನರ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ಗಾಗಿ ಇಂಟರ್‌ಪೋಲ್‌ ಅನ್ನು ಸಂಪರ್ಕಿಸಿದೆ. 14 ಜನರಿಗೆ ಸಂಬಂಧಿಸಿದಂತೆ ವಿವಿಧ ದೇಶಗಳಿಗೆ ಹಸ್ತಾಂತರದ ಕೋರಿಕೆಗಳನ್ನು ಕಳುಹಿಸಲಾಗಿದ್ದು, 11 ಜನರ ವಿರುದ್ಧ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ 2018 ರಡಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಠಾಕೂರ್ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಬ್ಯಾಂಕ್ ವಂಚನೆ ಆರೋಪ ಎದುರಿಸುತ್ತಿದ್ದ 27 ಮಂದಿ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯದ ದಾಖಲೆಗಳನ್ನು ಉಲ್ಲೇಖಿಸಿ ಸರ್ಕಾರ 2019 ರ ಜನವರಿ 4 ರಂದು ಸಂಸತ್ತಿಗೆ ತಿಳಿಸಿತ್ತು.

ಪರಾರಿಯಾದವರ ಪಟ್ಟಿಯಲ್ಲಿ 9,000 ಕೋಟಿ ವಂಚಿಸಿದ ವಿಜಯ್ ಮಲ್ಯ, 12,000 ಕೋಟಿ ರೂ.ವಂಚಿಸಿದ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಕುಟುಂಬ ಹಾಗೂ 15,000 ಕೋಟಿ ರೂ.ವಂಚಿಸಿದ ಸಂದೇಸರಸ್ ಪ್ರಮುಖರಾಗಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group