ರಾಷ್ಟ್ರೀಯ ಸುದ್ದಿ

ಬ್ರಾಹ್ಮಣ ಪುರೋಹಿತರಿಗೆ ಮಾಸಿಕ 1 ಸಾವಿರ ರೂ.ಭತ್ಯೆ, ಉಚಿತ ವಸತಿ: ಮಮತಾ ಬ್ಯಾನರ್ಜಿ ಘೋಷಣೆ

2021ರಲ್ಲಿ ವಿಧಾನಸಭಾ ಚುನಾವಣೆಗೆ ಆಮಿಷ

ವರದಿಗಾರ (ಸೆ.15): ಪಶ್ಚಿಮಬಂಗಾಳದ 8000ಕ್ಕೂ ಅಧಿಕ ಬಡ ಸನಾತನ ಬ್ರಾಹ್ಮಣ ಪುರೋಹಿತರಿಗೆ ಮಾಸಿಕ 1000 ರೂ.ಭತ್ಯೆ ಮತ್ತು ಉಚಿತ ವಸತಿ ಸೌಲಭ್ಯ ನೀಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಉಡುಗೊರೆ ಘೋಷಿಸಿದ್ದಾರೆ.

ನಾವು ಈ ಹಿಂದೆ ಕೋಲಘಾಟ್‌ನಲ್ಲಿ ಅಕಾಡೆಮಿ ಸ್ಥಾಪಿಸಲು ಸನಾತನ ಬ್ರಾಹ್ಮಣರಿಗೆ ಭೂಮಿ ನೀಡಿದ್ದೆವು. ಈ ಪಂಥದ ಅನೇಕ ಪುರೋಹಿತರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಅವರಿಗೆ ತಿಂಗಳಿಗೆ 1,000 ರೂ. ಭತ್ಯೆ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಯಡಿ ಉಚಿತ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಅವರಿಗೆ ಸಹಾಯ ಮಾಡಲು ನಾವು ನಿರ್ಧರಿಸಿದ್ದೇವೆ ಬ್ಯಾನರ್ಜಿ ಹೇಳಿದ್ದಾರೆ.

ಹಿಂದಿ ದಿವಸ್ ಗೆ ಅಭಿನಂದನೆ ಸಲ್ಲಿಸಿದ ಅವರು, ತಮ್ಮ ಸರ್ಕಾರವು ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ ಮತ್ತು ಭಾಷಾ ಪಕ್ಷಪಾತ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ನಾವು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇವೆ. ಹೊಸ ಹಿಂದಿ ಅಕಾಡೆಮಿ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಅದೇ ರೀತಿ ದಲಿತ ಸಾಹಿತ್ಯ ಅಕಾಡೆಮಿಯನ್ನೂ ಸ್ಥಾಪಿಸಲು ನಿರ್ಧರಿಸಿದ್ದೇವೆ. ದಲಿತರ ಭಾಷೆಗಳು ಬಂಗಾಳಿ ಭಾಷೆಯ ಮೇಲೆ ಅಪಾರ ಪ್ರಭಾವ ಬೀರಿವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group