ರಾಜ್ಯ ಸುದ್ದಿ

ಬೊಕ್ಕಸ ತುಂಬಲು 33 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

ವರದಿಗಾರ (ಸೆ.15): ಸಾಲ ಪಡೆದು ಸರ್ಕಾರಿ ಬೊಕ್ಕಸ ತುಂಬಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ಕೊರೊನಾ ಮತ್ತು ಲಾಕ್ ಡೌನ್ ‍ನಿಂದಾಗಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅನುದಾನ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರೂಪಾಯಿ ಸಾಲ ಪಡೆಯುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಇಂದು ಕೈಗೊಂಡಿದೆ.

ಕೋವಿಡ್‌ನಿಂದಾಗಿ ರಾಜ್ಯ ಆರ್ಥಿಕ ಪರಿಸ್ಥಿತಿಗೆ ಪೆಟ್ಟು ಬಿದ್ದಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಕೋವಿಡ್ ಪರಿಣಾಮ ರಾಜ್ಯದ ಬೊಕ್ಕಸಕ್ಕೆ ಬರುತ್ತಿದ್ದ ಆದಾಯ ಕಡಿಮೆಯಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಕಲ್ಪಿಸುವ ಉದ್ದೇಶದಿಂದ 33 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಭೆಯ ಬಳಿಕ ಕಾನೂನು ಮತ್ತು ಸಂಸದೀ ಯ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group