ರಾಷ್ಟ್ರೀಯ ಸುದ್ದಿ

ಚೀನಾದ ಅತಿಕ್ರಮಣ; ಮೋದಿಜಿ ದೇಶವನ್ನು ದಾರಿ ತಪ್ಪಿಸಿದ್ದಾರೆ ಎಂಬುದು ರಕ್ಷಣಾ ಸಚಿವರ ಹೇಳಿಕೆಯಿಂದ ಸ್ಪಷ್ಟ: ರಾಹುಲ್ ಗಾಂಧಿ

ಭಾರತದ 38,000 ಚದರ ಕಿ.ಮೀ. ಭೂಮಿ ಆಕ್ರಮಿಸಿಕೊಂಡಿರುವ ಚೀನಾ

 

ವರದಿಗಾರ (ಸೆ.15): ಚೀನಾ ನಮ್ಮ 38,000 ಚದರ ಕಿ.ಮೀ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಮಾತ್ರವಲ್ಲ ಇದು ಇನ್ನೂ 90,000 ಚದರ ಕಿ.ಮೀ. ಭೂಮಿಯನ್ನು ತನ್ನದೇ ಎಂದು ಪರಿಗಣಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಆದರೆ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಅನ್ನು ಸ್ಪಷ್ಟವಾಗಿ ವಿವರಿಸಲಾಗಿಲ್ಲ.

ಮೇ ಮತ್ತು ಜೂನ್ ತಿಂಗಳಲ್ಲಿ ಚೀನಾವು ಪರಿಸ್ಥಿತಿಯನ್ನು ಹದಗೆಡಿಸಲು ಪ್ರಯತ್ನಿಸಿತು. ಇದು ಭಾರತ ಕೂಡ ಪ್ರತಿಕ್ರಿಯೆ ನೀಡಲು ಕಾರಣವಾಯಿತು ಎಂದು ರಕ್ಷಣಾ ಸಚಿವರು ಹೇಳಿದರು. “ಇಂತಹ ಘಟನೆಗಳು ನಮಗೆ ಸ್ವೀಕಾರಾರ್ಹವಲ್ಲ ಎಂದು ನಾವು ಚೀನಾಕ್ಕೆ ತಿಳಿಸಿದ್ದೇವೆ” ಎಂದು ರಾಜನಾಥ್ ಹೇಳಿದ್ದಾರೆ.

ಚೀನಾ ಜೊತೆಗಿನ ಗಡಿ ಸಂಘರ್ಷ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಚೀನಾದ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಮೋದಿ ಜಿ ದೇಶವನ್ನು ದಾರಿ ತಪ್ಪಿಸಿದ್ದಾರೆ ಎಂಬುದು ರಕ್ಷಣಾ ಸಚಿವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ನಮ್ಮ ದೇಶವು ಯಾವಾಗಲೂ ಭಾರತೀಯ ಸೇನೆಯೊಂದಿಗೆ ನಿಂತಿದೆ ಮತ್ತು ಮುಂದೆಯೂ ನಿಲ್ಲುತ್ತದೆ ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
“ಆದರೆ ಮೋದಿಜಿ, ನೀವು ಯಾವಾಗ ಚೀನಾ ವಿರುದ್ಧ ನಿಲ್ಲುತ್ತೀರಿ? ನಮ್ಮ ದೇಶದ ಭೂಮಿಯನ್ನು ನಾವು ಯಾವಾಗ ಚೀನಾದಿಂದ ಹಿಂಪಡೆಯುತ್ತೇವೆ? ಚೀನಾ ಹೆಸರು ಹೇಳಲು ಹೆದರಬೇಡಿ ”ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group