ರಾಷ್ಟ್ರೀಯ ಸುದ್ದಿ

ಭಾರತದಲ್ಲಿ ಅರ್ಧ ಕೋಟಿ ದಾಟಿದ ಕೊರೊನಾ ಸೋಂಕು

ವರದಿಗಾರ (ಸೆ.16): ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಕೊವಿಡ್‍ ಪ್ರಕರಣಗಳ ಒಟ್ಟು ಸಂಖ್ಯೆ 50 ಲಕ್ಷ ದಾಟಿದೆ.

ಒಂದೇ ದಿನದಲ್ಲಿ ದೇಶದಲ್ಲಿ 90,123 ಹೊಸ ಪ್ರಕರಣಗಳು ಮತ್ತು 1,290 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳು ಸೇರಿ ಸದ್ಯ ಒಟ್ಟು ಪ್ರಕರಣಗಳ ಸಂಖ್ಯೆ 50,20,360 ರಷ್ಟಿದ್ದರೆ, ಸಾವಿನ ಸಂಖ್ಯೆ 82,066 ಕ್ಕೆ ಏರಿದೆ. ಸಾವಿನ ಪ್ರಮಾಣ ಸದ್ಯ, ಶೇ 1.63 ರಷ್ಟಿದೆ.

ಚೇತರಿಕೆಗೆ ಸಂಬಂಧಿಸಿದಂತೆ ಕಳೆದೊಂದು ದಿನದಲ್ಲಿ 82,961 ಸೋಂಕಿತರು ಗುಣಮುಖರಾಗುವುದರೊಂದಿಗೆ ಚೇತರಿಕೆ ಕಂಡ ಪ್ರಕರಣಗಳ ಒಟ್ಟು ಸಂಖ್ಯೆ 39,42,360 ಕ್ಕೆ ಮತ್ತು ಚೇತರಿಕೆ ಪ್ರಮಾಣ ಶೇ 78.53 ಕ್ಕೆ ಏರಿದೆ. ಪ್ರಸ್ತುತ ದೇಶದಲ್ಲಿ 99,59,33 ಸಕ್ರಿಯ ಪ್ರಕರಣಗಳಿವೆ. ಇವು ಇದುವರೆಗೆ ವರದಿಯಾದ ಒಟ್ಟು ಪ್ರಕರಣಗಳ ಪೈಕಿ ಶೇ 19.84ರಷ್ಟಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group