ರಾಷ್ಟ್ರೀಯ ಸುದ್ದಿ

861.9 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಸಂಸತ್ ಭವನ ನಿರ್ಮಾಣದ ಟೆಂಡರ್ ಪಡೆದುಕೊಂಡ ಟಾಟಾ ಕಂಪನಿ

ವರದಿಗಾರ (ಸೆ.16): ಹೊಸ ಸಂಸತ್ ಕಟ್ಟಡ ನಿರ್ಮಿಸುವ ಗುತ್ತಿಗೆಯನ್ನು ಕೈವಶ ಮಾಡಿಕೊಳ್ಳುವಲ್ಲಿ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆ ಯಶಸ್ವಿಯಾಗಿದೆ. 861.9 ಕೋಟಿ ರೂ.ವೆಚ್ಚದಲ್ಲಿ 21 ತಿಂಗಳ ಅವಧಿಯಲ್ಲಿ ಸಂಸತ್ ನ ಹೊಸ ಕಟ್ಟಡ ನಿರ್ಮಾಣವಾಗಲಿದೆ.

865 ಕೋಟಿ ರೂ.ಗಳ ಬಿಡ್ ಸಲ್ಲಿಸಿದ್ದ ಲಾರ್ಸೆನ್ ಮತ್ತು ಟೌಬ್ರೊ ಕಂಪನಿಯನ್ನು ಹಿಂದಕ್ಕೆ ತಳ್ಳಿ ಟಾಟಾ ಕಂಪನಿ ಬಿಡ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕೇಂದ್ರ ಲೋಕೋಪಯೋಗಿ ಇಲಾಖೆ ಹೊಸ ಸಂಸತ್ ಕಟ್ಟಡ ನಿರ್ಮಾಣಕ್ಕೆ ಬಿಡ್ ಕರೆದಿತ್ತು. ಹೊಸ ಕಟ್ಟಡವು ತ್ರಿಕೋನ ವಿನ್ಯಾಸವನ್ನು ಹೊಂದಿರುತ್ತದೆ. ಆದಾಗ್ಯೂ, ಕೊರೊನಾ ಸೋಂಕಿನ ಕಾರಣದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ಸಮಯದಲ್ಲಿ ಈ ಅತಿಯಾದ ಖರ್ಚು ಅಗತ್ಯವಿಲ್ಲ ಎಂದು ಹಲವು ನಾಯಕರು ಟೀಕಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group