ರಾಷ್ಟ್ರೀಯ ಸುದ್ದಿ

ಚಿನ್ನ ಕಳ್ಳಸಾಗಣೆ ಪ್ರಕರಣ: ಎನ್ಐಎಯಿಂದ ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ವಿಚಾರಣೆ

ವರದಿಗಾರ (ಸೆ.17): ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಅವರನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ –ಎನ್ಐಎ ವಿಚಾರಣೆಗೆ ಒಳಪಡಿಸಿದೆ.

ಇಂದು ಬೆಳಗ್ಗೆ 6 ಗಂಟೆಗೆ ಜಲೀಲ್ ಕೊಚ್ಚಿಯಲ್ಲಿರುವ ಎನ್ಐಎ ಕಚೇರಿಗೆ ಆಗಮಿಸಿದರು. ಅವರನ್ನು ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಜಲೀಲ್ ಅವರ ಹೆಸರು ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರ ಮೊಬೈಲ್ ಕರೆ ಲೀಸ್ಟ್ ನಲ್ಲಿ ಪತ್ತೆಯಾಗಿತ್ತು. ಸ್ವಪ್ನಾ ಅವರನ್ನು ಈ ವರ್ಷದ ಜುಲೈಯಲ್ಲಿ ಬಂಧಿಸಲಾಗಿತ್ತು.

ಸ್ವಪ್ನಾ ಅವರ ಕರೆಗಳ ಪಟ್ಟಿಯಲ್ಲಿ ಜಲೀಲ್ ಅವರ ಹೆಸರು ಇರುವುದು ಬಹಿರಂಗವಾದ ಕೂಡಲೇ, ರಾಜ್ಯ ರಾಜಧಾನಿಯಲ್ಲಿ ಯುಎಇ ಕಾನ್ಸುಲೇಟ್ ನೀಡುವ ರಂಜಾನ್ ಕಿಟ್‌ಗಳಿಗೆ ಸಂಬಂಧಿಸಿದಂತೆ ಸ್ವಪ್ನಾ ಅವರನ್ನು ಕಾನ್ಸುಲರ್ ಉದ್ಯೋಗಿ ಎಂಬ ನೆಲೆಯಲ್ಲಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದರು.

ಜಲೀಲ್ ವಿರುದ್ಧ ಕೇರಳದಾದ್ಯಂತ ವ್ಯಾಪಕ ಪ್ರತಿಭಟನೆ ನಡೆದು, ಅವರ ರಾಜೀನಾಮೆಗೆ ಒತ್ತಾಯಿಸಲಾಗಿತ್ತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಚಿವರ ರಾಜೀನಾಮೆಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿದ್ದರು. ಸಚಿವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ರಾಜ್ಯದ ಕೋವಿಡ್ -19 ಸಾಂಕ್ರಾಮಿಕ ವಿರುದ್ಧದ ಹೋರಾಟದ ಸ್ಫೂರ್ತಿಯನ್ನು ನಾಶಮಾಡುವ ಕ್ರಮವಾಗಿದೆ ಎಂದು ಆಪಾದಿಸಿದ್ದರು.

ಚಿನ್ನಕಳ್ಳಸಾಗಣೆ ಪ್ರಕರಣದಲ್ಲಿ ಜಲೀಲ್‌ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂಬ ವರದಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಳ್ಳಿಹಾಕಿತ್ತು. ರಾಜತಾಂತ್ರಿಕ ಪಾರ್ಸೆಲ್ ನಲ್ಲಿ 30 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ನಂತರ ಜುಲೈ 5 ರಂದು ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿತ್ತು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group