ರಾಷ್ಟ್ರೀಯ ಸುದ್ದಿ

ದೆಹಲಿ ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಸಲು ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿಗೆ ಮನವಿ

ವರದಿಗಾರ (ಸೆ.17): ಪ್ರತಿಪಕ್ಷದ ನಾಯಕರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ, ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆ ಮತ್ತು ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸಂಸದ ಅಹ್ಮದ್ ಪಟೇಲ್, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಡಿಎಂಕೆ ನಾಯಕಿ ಮತ್ತು ಸಂಸದೆ ಕನಿಮೋಳಿ, ಆರ್ ಜೆಡಿ ನಾಯಕ ಮತ್ತು ಸಂಸದ ಮನೋಜ್ ಕೆ ಝಾ ಅವರ ನಿಯೋಗ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಪೊಲೀಸರು ನಡೆಸುತ್ತಿರುವ ತನಿಖೆ ಬಗ್ಗೆ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ. “ಇಡೀ ತನಿಖೆ ಮಾರ್ಚ್ 2020 ರಲ್ಲಿ ಲೋಕಸಭೆಯಲ್ಲಿ ಗೃಹ ಸಚಿವರು ಪ್ರತಿಪಾದಿಸಿದ ಪಿತೂರಿಯಂತೆ ನಡೆದಿದೆ. ಪೊಲೀಸರ ತನಿಖೆಯ ನಿಷ್ಪಕ್ಷಪಾತ ಬಗ್ಗೆ ಗಂಭೀರವಾದ ಪ್ರಶ್ನೆಗಳು ಇರುವುದರಿಂದ ಅವರ ತನಿಖೆಯ ಮೇಲೆ ವಿಶ್ವಾಸ ಮೂಡುತ್ತಿಲ್ಲ ಎಂದು ನಾಯಕರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಬೇಕು ಎಂದು ನಾಯಕರು ಒತ್ತಾಯಿಸಿದ್ದಾರೆ.

ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ ಮತ್ತು ಅದರ ವಿಶೇಷ ಘಟಕವು ಗಲಭೆಯ ಹಿಂದಿನ ಪಿತೂರಿಯ ಅಂಶವನ್ನು ಪರಿಶೀಲಿಸುತ್ತಿದೆ. ದೆಹಲಿ ಗಲಭೆಯಲ್ಲಿ 53 ಜನರು ಪ್ರಾಣ ಕಳೆದುಕೊಂಡಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group