ರಾಷ್ಟ್ರೀಯ ಸುದ್ದಿ

ಬಿಹಾರ: ಉದ್ಘಾಟನೆಗೂ ಮುನ್ನ ಪ್ರವಾಹದಲ್ಲಿ ಕೊಚ್ಚಿಹೋದ 1.42 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ

ವರದಿಗಾರ (ಸೆ.18): ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ದಿಘಲ್‌ಬ್ಯಾಂಕ್ ಬ್ಲಾಕ್‌ನ ಪಟ್ಟರ್‌ಘಟ್ಟಿ ಪಂಚಾಯತ್‌ನ ಗೋದಬರಿಯಲ್ಲಿ 1.42 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೂ ಮೊದಲೇ ಪ್ರವಾಹದಲ್ಲಿ ಕೊಚ್ಚಿಹೋಗಿದೆ.
ಈ ಸೇತುವೆಯ ನಿರ್ಮಾಣ ಕಾರ್ಯ ಕಳೆದ ವರ್ಷ ಜೂನ್‌ನಲ್ಲಿ ಪ್ರಾರಂಭವಾಗಿತ್ತು. ಪೂರ್ಣಗೊಳ್ಳಲು ಒಂದು ವರ್ಷ ತೆಗೆದುಕೊಳ್ಳಲಾಗಿತ್ತು. ಇದನ್ನು ಕಂಕೈ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು, ಉದ್ಘಾಟನೆಗಾಗಿ ಕಾಯಲಾಗುತ್ತಿತ್ತು. ಆದರೆ ಅದಕ್ಕೂ ಮೊದಲೇ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ.

ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮೊದಲು ಅದರ ಉದ್ಘಾಟನೆಗೆ ನಿರ್ಧರಿಸಲಾಗಿತ್ತು.
ಸೇತುವೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದ ಬಗ್ಗೆ ಸ್ಥಳೀಯ ಶಿಕ್ಷಕ ಜಮಿಲ್ ಅಖ್ತರ್ ಆರೋಪಿಸಿದ್ದಾರೆ. ಈ ಸೇತುವೆಯ ಮೂಲಕ ನಮ್ಮ ಕನಸು ಹಾಗೂ ಸುದೀರ್ಘ ಹೋರಾಟ ಕೂಡ ಕೊಚ್ಚಿ ಹೋಗಿವೆ. ಕಾಮಗಾರಿಯಲ್ಲಿ ಗುಣಮಟ್ಟ ಇಲ್ಲದ ಸಲಕರಣೆಗಳನ್ನು ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group