ರಾಷ್ಟ್ರೀಯ ಸುದ್ದಿ

ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ 97 ಮಂದಿ ವಲಸೆ ಕಾರ್ಮಿಕರ ಸಾವು; ರಾಜ್ಯಸಭೆಗೆ ತಿಳಿಸಿದ ಸರ್ಕಾರ

ವರದಿಗಾರ (ಸೆ.19): ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ 97 ಮಂದಿ ವಲಸೆ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯನ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ರೈಲ್ವೆ ಸಚಿವ ಪಿಯೂಶ್ ಗೋಯಲ್ ಈ ಮಾಹಿತಿ ನೀಡಿದ್ದಾರೆ.  “ರಾಜ್ಯ ಪೊಲೀಸರು ಒದಗಿಸಿದ ಮಾಹಿತಿಯ ಆಧಾರದ ಮೇಲೆ, ಕೋವಿಡ್ -19 ಪರಿಸ್ಥಿತಿ / ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾಗ ಸೆಪ್ಟಂಬರ್ 9, 2020 ರವರೆಗೆ 97 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

“ರಾಜ್ಯ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣಗಳಲ್ಲಿ ಸಿ.ಆರ್.ಪಿ.ಸಿ ಯ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಸಚಿವರು ಹೇಳಿದರು. 97 ಸಾವಿನ ಪ್ರಕರಣಗಳ ಪೈಕಿ 87 ಪ್ರಕರಣಗಳಲ್ಲಿ ರಾಜ್ಯ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಈವರೆಗೆ ಒಟ್ಟು 51 ಮರಣೋತ್ತರ ವರದಿಗಳನ್ನು ಆಯಾ ರಾಜ್ಯ ಪೊಲೀಸ್ ಪಡೆಗಳಿಂದ ಪಡೆಯಲಾಗಿದ್ದು, ಇದರಲ್ಲಿ ಸಾವಿಗೆ ಹೃದಯಾಘಾತ/ ಹೃದಯ ಕಾಯಿಲೆ / ಮೆದುಳಿನ ರಕ್ತಸ್ರಾವ / ಮೊದಲೇ ಅಸ್ತಿತ್ವದಲ್ಲಿರುವ ದೀರ್ಘಕಾಲದ ಕಾಯಿಲೆ / ದೀರ್ಘಕಾಲದ ಶ್ವಾಸಕೋಶದ ಕಾಯಿಲೆ / ದೀರ್ಘಕಾಲದ ಯಕೃತ್ತಿನ ಕಾಯಿಲೆ ಮುಂತಾದವು ಕಾರಣ ಎಂದು ತಿಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group