ರಾಷ್ಟ್ರೀಯ ಸುದ್ದಿ

ಮೋದಿ ಜನ್ಮದಿನ ನಿರುದ್ಯೋಗ ದಿನವಾಗಿ ಆಚರಣೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿರುವುದರ ಲಕ್ಷಣ: ಸಿದ್ದರಾಮಯ್ಯ

ವರದಿಗಾರ (ಸೆ.19): ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ‌ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈ ವರೆಗೆ ಮಾತನಾಡಿಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದರು.

ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದು ಹೇಳಿದರು.

ದೇಶದ ಇತರ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾಂಗ್ರೆಸ್ ಮಾತೃಪಕ್ಷ. ಅದು ರಾಷ್ಟ್ರೀಯ ಪಕ್ಷವೇ ಆಗಿರಲಿ ಅಥವಾ ಪ್ರಾದೇಶಿಕ ಪಕ್ಷಗಳೇ ಆಗಿರಲಿ. ಅವು ಒಂದಲ್ಲಾ ಒಂದು ರೀತಿ ಕಾಂಗ್ರೆಸ್ ಪಕ್ಷದ ಮೂಲದಿಂದಲೇ ಅಸ್ತಿತ್ವಕ್ಕೆ ಬಂದಿವೆ. ಹಾಗಾಗಿಯೇ ದೇಶದ ಉದ್ದಗಲಕ್ಕೂ ಕಾರ್ಯಕರ್ತರನ್ನು ಹೊಂದಿರುವ ಏಕೈಕ ಪಕ್ಷವೆಂಬ ಹೆಗ್ಗಳಿಕೆ ನಮಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜಕೀಯಕ್ಕಷ್ಟೇ ಸೀಮಿತವಲ್ಲ, ಇದೊಂದು ಚಳವಳಿ. ದೇಶದ ಸ್ವಾತಂತ್ರ್ಯಕ್ಕಾಗಿ ಆರಂಭಗೊಂಡ ಕಾಂಗ್ರೆಸ್‌ ಎಂಬ ಚಳವಳಿ ಇಂದು ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆಯ ಸ್ಥಾಪನೆಗಾಗಿ ನಿರಂತರವಾಗಿದೆ. ಈ ಸಿದ್ಧಾಂತಗಳನ್ನು ಬೆಂಬಲಿಸುವ ಎಲ್ಲಾ ಮನಸ್ಸುಗಳು ಈ ವೇಳೆ ಒಂದಾಗಬೇಕು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group