ವರದಿಗಾರ (ಸೆ.19): ರಾಜ್ಯದಲ್ಲಿ ಚುನಾವಣಾ ವಾತಾವರಣ ಇನ್ನೂ ನಿರ್ಮಾಣವಾಗಿಲ್ಲ. ಆದರೆ ಈಗ ರಾಜಕೀಯ ಪರ್ವ ಆರಂಭವಾಗಿದೆ. ವಿವಿಧ ಪಕ್ಷಗಳ ಅರವತ್ತು ಮಂದಿ ಮುಖಂಡರು ಕಾಂಗ್ರೆಸ್ ಪಕ್ಷ ಸೇರಲು ಅರ್ಜಿ ಹಾಕಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಅವರು ಮಾತನಾಡಿದರು.
ವಿವಿಧ ಪಕ್ಷಗಳ ಮುಖಂಡರು ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಅದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಶೀಘ್ರದಲ್ಲೇ ವಿಧಾನ ಪರಿಷತ್ರಿಗೆ ಚುನಾವಣೆ ನಡೆಯಲರುವ ಹಿನ್ನೆಲೆಯಲ್ಲಿ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.
ಕೊರೊನಾ ಸಮಯದಲ್ಲಿ ಮುಖ್ಯಮಂತ್ರಿ 1,600 ಕೋಟಿಯ ಪ್ಯಾಕೇಜ್ ಘೋಷಿಸಿದ್ದರು. ಆ ಮೊತ್ತ ಯಾವ, ಯಾವ ಕ್ಷೇತ್ರಗಳಿಗೆ ತಲುಪಿದೆ ಎಂದು ಅಧಿವೇಶನದ ಆರಂಭದಲ್ಲಿಯೇ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.
