ರಾಜ್ಯ ಸುದ್ದಿ

ರೈತ ವಿರೋಧಿ ಮಸೂದೆ ವಿರೋಧಿಸಿ ಸೆ.21ರಂದು ರೈತರಿಂದ ವಿಧಾನಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ವರದಿಗಾರ (ಸೆ.19): ರೈತ ವಿರೋಧಿ ಮಸೂದೆಗಳು ಮತ್ತು ಸುಗ್ರೀವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರ ಸೋಮವಾರ ವಿಧಾನ ಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಸೆಪ್ಟೆಂಬರ್ 21 ರಂದು ಸೋಮವಾರ ವಿಧಾನ ಸಭಾ ಅಧಿವೇಶನ ಪ್ರಾರಂಭಗೊಳ್ಳಲಿದೆ. ಈ ಅಧಿವೇಶನದಲ್ಲಿ ಕೃಷಿಗೆ ಸಂಬಂಧಿಸಿದ ಸುಗ್ರೀವಾಜ್ಞೆಗಳನ್ನು ಈ ಹಿಂದೆ ಜಾರಿಗೊಳಿಸಲಾಗಿತ್ತು. ಈಗ ಈ ಅಧಿವೇಶನದಲ್ಲಿ ಅಂಗೀಕರಿಸುವ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಲಿದೆ. ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಂದು ಬೆಳಗ್ಗೆ ನಗರದ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ನಡೆಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group