ರಾಜ್ಯ ಸುದ್ದಿ

ಮಂಗಳಮುಖಿಯರ ಪರ ಹೋರಾಟಗಾರ್ತಿ ಡಾ.ಅಕೈ ಪದ್ಮಶಾಲಿ ಕಾಂಗ್ರೆಸ್ ಸೇರ್ಪಡೆ

ವರದಿಗಾರ (ಸೆ.20): ಲೈಂಗಿಕ ಅಲ್ಪಸಂಖ್ಯಾತರು ಮತ್ತು ಮಂಗಳಮುಖಿಯರ ಪರ ಹೋರಾಟಗಾರ್ತಿ ಡಾ.ಅಕೈ ಪದ್ಮಶಾಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಮಂಗಳಮುಖಿಯರ ಸಂಘಟನೆ ‘ಒಂದೆಡೆ’ ಸಂಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಡಾ. ಅಕೈ ಪದ್ಮಶಾಲಿ ಅವರಿಗೆ ಕೆ. ಶಿವಕುಮಾರ್ ಅವರು ಪಕ್ಷದ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಕಾಲದಿಂದಲೂ ಕಾಂಗ್ರೆಸ್ ಲೈಂಗಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳ್ಳೆಯ ಕೆಲಸ ಮಾಡಿದೆ. ತಮ್ಮ ಬಳಿ ಯಾರೇ ಬಂದರೂ ಕಾಂಗ್ರೆಸ್ ಸೇರಲು ಶಿಫಾರಸು ಮಾಡುತ್ತೇನೆ ಎಂದರು.
ನಮಗೆ ಸಾಮಾಜಿಕ ನ್ಯಾಯ ಸಿಕ್ಕಿರುವುದು ಕಾಂಗ್ರೆಸ್ ಪಕ್ಷದಿಂದ. ಸುಪ್ರೀಂ ಕೋರ್ಟ್ ನಿಂದಲೂ ಕೂಡ ಅಲ್ಪಸಂಖ್ಯಾತರಿಗೆ ಸಮಾಜದಲ್ಲಿ ಗೌರವದ ಸ್ಥಾನಮಾನ ಸಿಗಬೇಕು ಎಂಬುವುದು ಬೇಡಿಕೆಯಾಗಿದೆ ಎಂದರು.
2018 ವಿಧಾನಸಭೆ ಚುನಾವಣೆಯ ಅವಧಿಯಲ್ಲಿ ಅಕೈ ಪದ್ಮಶಾಲಿ ಸೇರಿದಂತೆ ಲೈಂಗಿಕ ಅಲ್ಪಸಂಖ್ಯಾತರು ಮೊದಲು ಬಾರಿ ಮತದಾನ ನಡೆಸಿದ್ದರು‌.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಸೌಮ್ಯಾ ರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಲ್ ಶಂಕರ್, ಉಪಮುಖ್ಯಸ್ಥರಾದ ವಿ.ಆರ್. ಸುದರ್ಶನ್, ಮಾಜಿ ಸಚಿವೆಯರಾದ ಉಮಾಶ್ರೀ, ಜಯಮಾಲ ಮತ್ತಿತರರು ಇದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group