ರಾಷ್ಟ್ರೀಯ ಸುದ್ದಿ

ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತು ಮಾಡಿದ ವೆಂಕಯ್ಯ ನಾಯ್ಡು

ವರದಿಗಾರ (ಸೆ.21): ರಾಜ್ಯಸಭೆ ಕಲಾಪಕ್ಕೆ ಭಾನುವಾರ ಅಡ್ಡಿಪಡಿಸಿದ 8 ಮಂದಿ ಸದಸ್ಯರನ್ನು ಒಂದು ವಾರ ಸದನದಿಂದ ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ನಸ ರಾಜೀವ್ ಸತಾವೊ, ರಿಪುನ್ ಬೋರಾ ಹಾಗೂ ನಾಸೀರ್ ಹುಸೇನ್, ಟಿ.ಎಂ.ಸಿಯ ಡೆರೆಕ್ ಒಬ್ರೇಯನ್, ಸಿಪಿಐನ ಕೆ.ಕೆ.ರಾಗೇಶ್, ಯಲ್ಲಂಮರಂ ಕರೀಂ ಹಾಗು ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಈ ಸದಸ್ಯರನ್ನು ಅಮಾನತುಗೊಳಿಸುವಂತೆ ಸಂಸದೀಯ ವ್ಯವಹಾರಗಳ ಖಾತೆ ಸಚಿವ ವಿ.ಮುರಳೀಧರನ್ ಮಂಡಿಸಿದ ನಿರ್ಣಯವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಸಭಾಪತಿ ಎಂ.ವೆಂಕಯ್ಯನಾಯ್ಡ, ಕೃಷಿ ವಿಧೇಯಕಗಳನ್ನು ಅಂಗೀಕರಿಸುವ ಸಂದರ್ಭದಲ್ಲಿ ಉಪಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಅವರ ಮೇಲೆ ನಿಯಮಾವಳಿ ಪುಸ್ತಕವನ್ನು ಹರಿದು ಎಸೆದು, ದುರ್ವತನೆ ತೋರಿದ ಸದಸ್ಯರನ್ನು ಅಮಾನತು ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ ರಾಜ್ಯಸಭೆ ಉಪಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಅವರ ವಿರುದ್ಧ 46 ಪ್ರತಿಪಕ್ಷ ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಸಭಾಪತಿ ಎಂ.ವೆಂಕಯ್ಯನಾಯ್ಡು ತಿರಸ್ಕರಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group