ರಾಜ್ಯ ಸುದ್ದಿ

ಕರ್ನಾಟಕದಲ್ಲೂ ಭುಗಿಲೆದ್ದ ರೈತರ ಆಕ್ರೋಶ; ಹೋರಾಟಕ್ಕೆ ಯೋಗೇಂದ್ರ ಯಾದವ್ ಬೆಂಬಲ

ವರದಿಗಾರ (ಸೆ.21): ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ರೈತರು ಅಲ್ಲಿ ಸಮಾವೇಶಗೊಂಡಿದ್ದು, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಯೋಗೇಂದ್ರ ಯಾದವ್, ಕರ್ನಾಟಕ ವಿಧಾನಸಭೆ ಭೂ ಸುಧಾರಣೆ ಕಾನೂನು ತಿದ್ದುಪಡಿ ಮಾಡಲು ಹೊರಟಿದೆ, ಆದರೆ ಇದು ಭೂ ಸುಧಾರಣೆಗಾಗಿ ಮಾಡುತ್ತಿರುವ ತಿದ್ದುಪಡಿಯಲ್ಲ, ಬದಲಾಗಿ ಭೂಮಿಯನ್ನು ನಾಶಪಡಿಸಲು ಮಾಡುತ್ತಿರುವ ತಿದ್ದುಪಡಿ. ರೈತರು ಇಡೀ ದೇಶದಲ್ಲಿ ಎದ್ದು ನಿಂತಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ರೈತ ಮಹಿಳೆ ಮಂಜುಳಾ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಹರಿಹಾಯ್ದ ಅವರು, ಬಿ.ಸಿ.ಪಾಟೀಲ್ ಅವಿವೇಕಿ, ನಮ್ಮನ್ನು ಅವಿವೇಕಿಯನ್ನಲು ಆತ ಯಾರು ಎಂದು ಕಿಡಿಕಾರಿದರು.

ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೊರೊನಾ ಹೆಸರಿನಲ್ಲಿ ಜನರನ್ನು ಮೌನವಾಗಿಸಿ ತಮಗೆ ಬೇಕಾದ ರೀತಿಯಲ್ಲಿ ಕಾಯ್ದೆಗಳನ್ನು ತಿದ್ದುಪಡಿ ತರಲು ನರೇಂದ್ರ ಮೋದಿ ಮುಂದಾಗಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group