ವರದಿಗಾರ (ಸೆ.22): ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 11ರಂದು ರಾತ್ರಿ ನಡೆದಿದ್ದ ಗಲಭೆ ಪ್ರಕರಣದ ಎರಡು ಎಫ್ ಐಆರ್ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ -ಎನ್ ಐ ಎ ವಹಿಸಿಕೊಂಡಿದೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರವೇಶ ಕೊಟ್ಟಿದ್ದು, ಗಲಭೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ.
ಈಗಾಗಲೇ ಡಿಜೆ ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಾಗೂ ಡಿ.ಜೆ ಹಳ್ಳಿ ಪೊಲೀಸರು ಆರೋಪಿಗಳ ಪ್ರಾಥಮಿಕ ಮಾಹಿತಿಯನ್ನು ಎನ್ ಐಎ ಗೆ ನೀಡಿದ್ದಾರೆ.
ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಗೈದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಫೇಸ್ ಬುಕ್ ಪೋಸ್ಟ್ ಹಾಕಿದ್ದ ನಂತರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಪ್ರತಿಭಟನಕಾರರನ್ನು ಚದುರಿಸಲು ನಡೆಸಿದ ಪೊಲೀಸ್ ಗೋಲಿಬಾರ್ ಗೆ ನಾಲ್ವರು ಮೃತಪಟ್ಟಿದ್ದರು.
ಐಜಿ ಶ್ರೇಣಿಯ ಅಧಿಕಾರಿಯ ನೇತೃತೃದ ತಂಡ ಈಗಾಗಲೇ ಬೆಂಗಳೂರಿಗೆ ಬಂದು ತನಿಖೆ ಕೈಗೊಂಡಿದೆ.
