ರಾಷ್ಟ್ರೀಯ ಸುದ್ದಿ

ಲಾಕ್ ಡೌನ್ ವೇಳೆ ಬಿಹಾರಕ್ಕೆ ಹಿಂದಿರುಗಿದ 3 ಲಕ್ಷ ವಲಸೆ ಕಾರ್ಮಿಕರ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆ

Migrant labours

ವರದಿಗಾರ (ಸೆ.22): ಲಾಕ್ ಡೌನ್ ಸಮಯದಲ್ಲಿ ಬಿಹಾರಕ್ಕೆ ವಿವಿಧ ರಾಜ್ಯಗಳಿಂದ ಹಿಂದಿರುಗಿದ 3 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಗುರುತಿನ ಚೀಟಿ ನೀಡಲಾಗಿದೆ.

ಕಳೆದ ಆರು ತಿಂಗಳಲ್ಲಿ ಚುನಾವಣಾ ಆಯೋಗವು ಸುಮಾರು 6.5 ಲಕ್ಷ ಹೊಸ ಮತದಾರರನ್ನು ದಾಖಲಿಸಿದೆ, ಅವರಲ್ಲಿ ಕೋವಿಡ್ -19 ಲಾಕ್ ಡೌನ್ ಸಮಯದಲ್ಲಿ ಮನೆಗೆ ಮರಳಿದ ಸುಮಾರು 3 ಲಕ್ಷ ವಲಸೆ ಕಾರ್ಮಿಕರು ಇದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಿಹಾರದಲ್ಲಿ ಅಕ್ಟೋಬರ್ – ನವೆಂಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಅಳಿಸಲು ಮತದಾರರು ಆನ್‌ಲೈನ್ ಅಥವಾ ನೇರವಾಗಿ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಮ್ಮ ಅಂದಾಜಿನ ಪ್ರಕಾರ, 30 ಲಕ್ಷ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದು, ಅವರಲ್ಲಿ ಶೇಕಡಾ 10-12ರಷ್ಟು ಮತದಾರರು ಗುರುತಿನ ಚೀಟಿ ಹೊಂದಿಲ್ಲ. ಏಪ್ರಿಲ್-ಮೇ ತಿಂಗಳಲ್ಲಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಹಿಂದಿರುಗಿದ ನಂತರ ಅವರಿಗಾಗಿ ತೆರೆಯಲಾದ ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದಾಗ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಯಿತು. ಆ ಲೆಕ್ಕಾಚಾರದ ಪ್ರಕಾರ, ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ವಲಸೆ ಬಂದವರ ಸಂಖ್ಯೆ ಸುಮಾರು 3 ಲಕ್ಷ ಇರುತ್ತದೆ ಎಂದು ಹೆಸರು ಹೇಳಲು ಇಚ್ಛಿಸದ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group