ರಾಜ್ಯ ಸುದ್ದಿ

ವಿಧಾನಸಭೆಯಲ್ಲಿ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಡಿಕೆಶಿ

ವರದಿಗಾರ (ಸೆ.22): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿಂದು ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ನಿಯಮ 69ರ ಅಡಿಯಲ್ಲಿ ಕೊರೊನಾ ಕುರಿತು ಮಾತನಾಡಿದ ಅವರು, ಕೊರೋನಾದಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಕಷ್ಟಗಳಿಗೆ ನಮ್ಮ ಹೃದಯ ಮಿಡಿಯಬೇಕಿತ್ತು. ಆದರೆ ರಾಜ್ಯ ಸರ್ಕಾರ ರೈತರು, ಬಡವರು,ಕಾರ್ಮಿಕರ ವಿಚಾರದಲ್ಲಿ ಅಮಾನವೀಯವಾಗಿ ನಡೆದುಕೊಂಡಿದ್ದು, ರಾಜ್ಯದ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಗುಡುಗಿದರು.

ಬಡವರ ಅನ್ನದಲ್ಲಿ ರಾಜಕೀಯ ಮಾಡಬೇಕಾ? ರಾಜ್ಯದ ಎಲ್ಲ ಪಕ್ಷಗಳು ಸರ್ಕಾರಕ್ಕೆ ಸಹಕಾರ,ಬೆಂಬಲ ನೀಡಿವೆ. ಪ್ರಧಾನಮಂತ್ರಿಗಳು 21 ದಿನಗಳಲ್ಲಿ ಈ ಯುದ್ಧ ಗೆಲ್ಲುತ್ತೇವೆ ಅಂತಾ ಹೇಳಿದ್ದರೂ ನಾವು ಸಹಕಾರ ನೀಡುತ್ತಲೇ ಬಂದಿದ್ದೇವೆ. ಆದರೆ ಆಡಳಿತರೂಢ ಬಿಜೆಪಿಯವರು ವಿವಿಧ ಇಲಾಖೆಗಳು, ಅಕ್ಷಯ ಪಾತ್ರೆಯವರು, ಇನ್ಫೋಸಿಸ್ ಸಂಸ್ಥೆಯವರು ಜನರಿಗೆ ಕೊಟ್ಟ ಆಹಾರ ಕಿಟ್ ಗಳ ಮೇಲೆ ತಮ್ಮ ಫೋಟೋ ಹಾಕಿಕೊಂಡು ಹಂಚಿದಿರಲ್ಲಾ. ಯಾವ ವ್ಯವಸ್ಥೆಯಲ್ಲಿ ಈ ಸರ್ಕಾರ ನಡೆಯುತ್ತಿದೆ. ಆನೇಕಲ್ ನಲ್ಲಿ ಬಾಣಂತಿಯರು,ಮಕ್ಕಳ ಪೌಷ್ಠಿಕ ಆಹಾರ ಕಿಟ್ ಮೇಲೆ ಬಿಜೆಪಿ ಚಿಹ್ನೆ ಹಾಕಿ ಅಕ್ರಮ ಮಾಡಿದರಲ್ಲ ಇವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ.? ಇದು ಒಂದು ಸರ್ಕಾರನಾ? ಎಂದು ಲೇವಡಿ ಮಾಡಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group