ರಾಜ್ಯ ಸುದ್ದಿ

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ

ವರದಿಗಾರ (ಸೆ.23): ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯ ವಸ್ತುಸ್ಥಿತಿಯ ಅಧ್ಯಯನಕ್ಕಾಗಿ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸತ್ಯಶೋಧನಾ ಸಮಿತಿ ಇಂದು ತನ್ನ ವರದಿ ಸಲ್ಲಿಸಿದೆ.

ಸಮಿತಿ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರಿಗೆ ವರದಿ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರವಾದಿ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಆ.11ರಂದು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group