ವರದಿಗಾರ (ಸೆ.23): ರೈಲ್ವೆ ಖಾತೆ ರಾಜ್ಯ ಸಚಿವ ಎಸ್. ಸುರೇಶ್ ಅಂಗಡಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ಅವರಿಗೆ 65 ವರ್ಷ ವಯಸ್ಸಾಗಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 2 ವಾರಗಳ ಹಿಂದೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರು ದೆಹಲಿಯ ಏಮ್ಸ್ ಗೆ ದಾಖಲಾಗಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸುರೇಶ್ ಅಂಗಡಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.
ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಕೂಡ ಕೊರೊನಾದಿಂದ ಮೃತಪಟ್ಟಿದ್ದರು. ರಾಜ್ಯದ ಇಬ್ಬರು ಸಂಸದರು ಕೊರೊನಾ ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ಇಬ್ಬರು ಪುತ್ರಿಯರು, ಪತ್ನಿ ಹಾಗೂ ಅಪಾರ ಬಂಧುಮಿತ್ರರನ್ನು ಅವರು ಅಗಲಿದ್ದಾರೆ.
