ವಿದೇಶ ಸುದ್ದಿ

ಭಾರತ ಸೇರಿ ಮೂರು ದೇಶಗಳಿಂದ ಬರುವ, ಹೋಗುವ ವಿಮಾನ ಹಾರಾಟದ ಮೇಲೆ ನಿಷೇಧ ಹೇರಿದ ಸೌದಿ

ವರದಿಗಾರ (ಸೆ.23): ಕೊರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಭಾರತಕ್ಕೆ ಮತ್ತು ಭಾರತದಿಂದ ಬರುವ ವಿಮಾನಗಳ ಮೇಲೆ ಸೌದಿ ಅರೇಬಿಯಾ ನಿಷೇಧ ಹೇರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳವಾರ ಹೊರಡಿಸಿದ ಸುತ್ತೋಲೆಯಲ್ಲಿ, ಸೌದಿ ಅರೇಬಿಯಾದ ಜನರಲ್ ಅಥಾರಿಟಿ ಆಫ್ ಸಿವಿಲ್ ಏವಿಯೇಷನ್ (ಜಿಎಸಿಎ) ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾದಿಂದ ಸೌದಿ ಅರೇಬಿಯಾಕ್ಕೆ ಬರುವ ಮತ್ತು ಹೋಗುವ ವಿಮಾನಗಳ ಮೇಲೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದೆ.

ಆದಾಗ್ಯೂ, ಇದು ಸರ್ಕಾರದ ಅಧಿಕೃತ ಆಹ್ವಾನವನ್ನು ಹೊಂದಿರುವ ಪ್ರಯಾಣಿಕರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. ಸೌದಿ ಅರೇಬಿಯಾದ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಚಾರ್ಟರ್ಡ್ ಫ್ಲೈಟ್ ಕಂಪನಿಗಳಿಗೆ ಇದು ಅನ್ವಯವಾಗಲಿದೆ.

ಐದು ದಿನಗಳ ಹಿಂದೆ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಗಸ್ಟ್ 28 ಮತ್ತು ಸೆಪ್ಟೆಂಬರ್ 4 ರಂದು ಕೊರೊನಾ ಪಾಸಿಟಿವ್ ಪ್ರಮಾಣಪತ್ರಗಳೊಂದಿಗೆ ಇಬ್ಬರು ಪ್ರಯಾಣಿಕರನ್ನು ಕರೆತಂದಿದ್ದಕ್ಕಾಗಿ ದುಬೈ ಸಿವಿಲ್ ಏವಿಯೇಷನ್ ಅಥಾರಿಟಿ (ಡಿಸಿಎಎ) ತನ್ನ ವಿಮಾನಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group