ರಾಜ್ಯ ಸುದ್ದಿ

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್

ವರದಿಗಾರ (ಸೆ.24): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದೆ.

ವಿಧಾನಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಡಿಯೂರಪ್ಪನವರ ಮಂತ್ರಿಮಂಡಲದ ಮೇಲೆ ವಿಶ್ವಾಸವಿಲ್ಲ ನಮಗೆ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ಕೊಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಆಗ ಸ್ಪೀಕರ್ ಅವಿಶ್ವಾಸ ನಿರ್ಣಯ ಮಂಡನೆಗೆ ಒಪ್ಪಿಗೆ ನೀಡಿದರು. ನಾವು ಮಂಡಿಸಿದ್ದೇವೆ ನೀವು ಸಮಯ ನಿಗದಿ ಮಾಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದಾಗ, ನಾಳೆ ಅಥವಾ ನಾಡಿದ್ದು ನಿಮಗೆ ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಆರ್. ಅಶೋಕ್, ನಮಗೆ ಬಹುಮತವಿದೆ, ಇದು ರಾಜಕೀಯ ಕಿಮಿಕ್, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಶಾಸಕರೇ ನಮ್ಮ ಜೊತೆ ಇದ್ದಾರೆ. ಇನ್ನು ಕೆಲವರು ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಚರ್ಚೆಗೆ ಅವಕಾಶ ಕೊಡಬಾರದು ಎಂದು ಹೇಳುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಗದ್ದಲವೆಬ್ಬಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group