ವರಿದಿಗಾರ (ಸೆ.24): ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮತ್ತಷ್ಟು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿಯವರು ಸೂಚಿಸಿದ್ದಾರೆ. ಆದರೆ ಮತ್ತೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಸಚಿವರು ಎಳೆದಿದ್ದಾರೆ.
