ರಾಜ್ಯ ಸುದ್ದಿ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ; ಎನ್ಐಎ ದಾಳಿ

ವರದಿಗಾರ (ಸೆ.24): ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹಲವೆಡೆ ರಾಷ್ಟ್ರೀಯ ತನಿಖಾ ದಳ-ಎನ್ಐ.ಎ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಗಲಭೆ ಪ್ರಕರಣದ ತನಿಖೆಯನ್ನು ಎನ್ ಐಎ ಕೈಗೆತ್ತಿಕೊಂಡಿತ್ತು. ಎನ್ಐಾಎ ಐಜಿ, ಡಿಐಜಿ, ಎಸ್ಪಿನ ನೇತೃತ್ವದ ಅಧಿಕಾರಿಗಳ‌ ತಂಡವು ಬೆಳಿಗ್ಗೆಯಿಂದ ದಾಳಿ ನಡೆಸಿದೆ. ಕೆಲವು ಪ್ರಮುಖ ಆರೋಪಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಿದೆ. ಬಳಿಕ ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

ಗಲಭೆ ಸಂಬಂಧ 300ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ವಿವರಗಳನ್ನು ಅಧಿಕಾರಿಗಳು ಸಂಗ್ರಹಿಸಿ ದಾಳಿ ನಡೆಸಿದ ಎನ್ಐಕಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ

ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ಆ.12ರಂದು ದಿಢೀರ್ ಆಗಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group