ರಾಜ್ಯ ಸುದ್ದಿ

ಕೊರೋನಾದಿಂದ ಶಾಸಕ ಬಿ. ನಾರಾಯಣರಾವ್ ನಿಧನ; ಡಿ.ಕೆ ಶಿವಕುಮಾರ್ ಸಂತಾಪ

ವರದಿಗಾರ (ಸೆ.24): ಬಸವಕಲ್ಯಾಣ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಬಿ.ನಾರಾಯಣರಾವ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ಕೊರೋನಾ ಕ್ರೌರ್ಯ ಮುಂದುವರಿದಿದೆ. ನಮ್ಮ ಶಾಸಕ ಹಾಗೂ ಪಕ್ಷದ ನಿಷ್ಠಾವಂತ ನಾಯಕ ನಾರಾಯಣರಾವ್ ರನ್ನು ಕೊರೋನಾ ನಮ್ಮಿಂದ ದೂರ ಮಾಡಿದೆ. ಬಡವರು, ದೀನದಲಿತರ ಪರ ವಿಶೇಷ ಕಾಳಜಿ ಹೊಂದಿದ್ದ ನಾರಾಯಣರಾವ್ ಅವರು ಏಳಿಗೆಗಾಗಿ ಶ್ರಮಿಸಿದ್ದರು. ಉತ್ತಮ ನಡೆ ನುಡಿ ಮೂಲಕ ಜನರಿಗೆ ಹತ್ತಿರವಾಗಿದ್ದ ನಾರಾಯಣರಾವ್ ಅವರನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ನಷ್ಟ ಉಂಟಾಗಿದೆ ಎಂದು ಡಿಕೆಸಿ ಹೇಳಿದ್ದಾರೆ.

ನಾರಾಯಣರಾವ್ ಅವರು ಉತ್ತಮ ವಾಗ್ಮಿಯಾಗಿದ್ದು, ಪಕ್ಷದ ಸಿದ್ಧಾಂತವನ್ನು ತಮ್ಮ ನೇರ ನುಡಿಗಳ ಮೂಲಕ ಮಂಡಿಸುತ್ತಿದ್ದರು. ಕಳೆದ ತಿಂಗಳ ಅಂತ್ಯದಲ್ಲಿ ಅವರಿಗೆ ಸೋಂಕು ತಗುಲಿರುವುದು ಖಚಿತವಾದ ನಂತರ ಆಸ್ಪತ್ರೆ ಸೇರಿದ್ದರು. ನಂತರ ಚೇತರಿಕೆ ಕಂಡಿದ್ದರು. ‘ನಾನು ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ದೂರವಾಣಿ ಮೂಲಕ ತಿಳಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

ಆದರೆ ಮತ್ತೆ ಅವರ ಆರೋಗ್ಯ ಕ್ಷೀಣಿಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈಗ ಅವರು ನಮ್ಮನ್ನು ಅಗಲಿದ್ದಾರೆ. ಪಕ್ಷಕ್ಕೆ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಸೇವೆ ಸಲ್ಲಿಸಿದ್ದ ನಾರಾಯಣರಾವ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಕರುಣಿಸಲಿ’ ಎಂದು ಡಿ.ಕೆ ಶಿವಕುಮಾರ್ ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group