ವರದಿಗಾರ (ಸೆ.27): ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್ ಅವರನ್ನು ಜೂನ್ನಲ್ಲೇ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಗಿನ ಜಾವ ಸುಮಾರು 6:55ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಿಜೆಪಿ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅತ್ಯಂತ ಪ್ರಮುಖ ಖಾತೆಗಳನ್ನು ನಿಭಾಯಿಸಿದದರು. ಸೈನ್ಯದಲ್ಲೂ ಸೇವೆ ಸಲ್ಲಿಸಿದ್ದ ಅವರು ಬಳಿಕ ರಾಜಕೀಯ ಪ್ರವೇಶಿಸಿದ್ದರು. ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ 2018ರಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2009ರಲ್ಲಿ ಬಿಜೆಪಿ ವಿರುದ್ಧವೇ ಜಸ್ವಂತ್ ಸಿಂಗ್ ಬಹಿರಂಗವಾಗಿ ಆರೋಪ ಮಾಡಿದ್ದರು.
