ರಾಜ್ಯ ಸುದ್ದಿ

ನಾಳೆ ಕರ್ನಾಟಕ ಬಂದ್ ಗೆ ರೈತರ ಕರೆ; ವ್ಯಾಪಕ ಬೆಂಬಲ; ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ

ವರದಿಗಾರ (ಸೆ.27): ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ರೈತ ಸಂಘಟನೆಗಳು ನಾಳೆ ಸೆ.28ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬಂದ್ ಯಶಸ್ವಿಯಾಗುವ ಸಾಧ್ಯತೆ ಇದೆ.

ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರಾಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಬ್ಬುಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ನಾಳಿನ ಬಂದ್ ಅಂಗವಾಗಿ ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ರಾಲಿ ಹಮ್ಮಿಕೊಳ್ಳಲಾಗಿದೆ. 2 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಹಾಗೆಯೇ ನಾಳಿನ ರೈತರ ಹೋರಾಟಕ್ಕೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಸಹ ಬೆಂಬಲ ನೀಡಿವೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲು ನಿರ್ಧರಿಸಲಾಗಿದೆ. ಟೌನ್ ಹಾಲ್, ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ವೃತ್ತ ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯಲಿವೆ. ಹೀಗಾಗಿ ಈ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಲಾಗಿದೆ.

ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಸಂಚಾರದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಅಂಗಡಿ ಮುಂಗಟ್ಟುಗಳು, ಮಾಲ್ಗಳು ಬಂದ ಆಗಲಿದ್ದು, ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್ಗೆ ಬೆಂಬಲ ಸೂಚಿಸಿವೆ. ಹಾಗಾಗಿ ಇವುಗಳು ರಸ್ತೆಗೆ ಇಳಿಯುವುದು ಅನುಮಾಣ. ಹೋಟೆಲ್ಗಳು ನೈತಿಕ ಬೆಂಬಕ ಮಾತ್ರ ಇರುವುದರಿಂದ ಅವು ತೆರೆದಿರಲಿವೆ. ಆದರೆ ಪರಿಸ್ಥಿತಿ ನೋಡುಕೊಂಡು ಮುಂದುವರಿಯಲಿವೆ. ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group