ವರದಿಗಾರ (ಸೆ.27 ): ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಇತ್ತೀಚೆಗೆ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಮಾಜಿ ಪೊಲೀಸ್ ಮಹಾ ನಿರ್ದೇಶಕ-ಡಿಜಿಪಿ ಗುಪ್ತೇಶ್ವರ್ ಪಾಂಡೆ ಭಾನುವಾರ ಅಧಿಕೃತವಾಗಿ ಜೆಡಿ(ಯು) ಪಕ್ಷ ಸೇರ್ಪಡೆಗೊಂಡಿದ್ದಾರೆ.
ಭಾನುವಾರ ಪಾಟ್ನಾದಲ್ಲಿರುವ ಮುಖ್ಯಮಂತ್ರಿ ನಿತಿಶ್ ಕುಮಾರ್ ಉಪಸ್ಥಿತಿಯಲ್ಲಿ ಅವರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಕ್ಷದ ಸದಸ್ಯತ್ವ ಪಡೆದುಕೊಂಡರು.
ಈ ತಿಂಗಳ 22 ರಂದು ಅವರು ಡಿಜಿಪಿ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ ಎಂದು ನಡೆದಿದ್ದ ಪ್ರಚಾರವನ್ನು ಅವರು ಖಂಡಿಸಿದ್ದರು. ಗುಪ್ತೇಶ್ವರ ಪಾಂಡೆ ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಬಿಹಾರ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಹಾರದ ಡಿಜಿಪಿಯ ವಿ ಆರ್ ಎಸ್ ಅಂಗೀಕಾರ!
