ರಾಜ್ಯ ಸುದ್ದಿ

ಬಿಜೆಪಿಯನ್ನು ಅಧಿಕಾರಕ್ಕೆ ಯಾಕಾದರೂ ತಂದೆವೋ ಎಂದು ರಾಜ್ಯದ ಜನ ಪರಿತಪಿಸುತ್ತಿದ್ದಾರೆ: ಸಿದ್ದರಾಮಯ್ಯ

siddaramaiah

ವರದಿಗಾರ (ಸೆ.27): ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ವಿವಿಧ ಜನವಿರೋಧಿ ಕಾಯಿದೆಗಳ ವಿರುದ್ಧ ರೈತ, ದಲಿತ, ಕಾರ್ಮಿಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಬಂದ್ ಗೆ ನಮ್ಮ‌ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು?

ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್‌ಟಾಪ್‌, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರುವುದು ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group