ರಾಷ್ಟ್ರೀಯ ಸುದ್ದಿ

ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

ಸರ್ಕಾರದಿಂದ ನಿರಂತರ ನಡೆಯುತ್ತಿರುವ ದಬ್ಬಾಳಿಕೆ ಕಾರಣ ಎಂದ ಮಾನವ ಹಕ್ಕುಗಳ ಸಂಸ್ಥೆ

ವರದಿಗಾರ (ಸೆ.29): ಕೇಂದ್ರ ಸರ್ಕಾರ ತಮ್ಮ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರಿಂದ ಭಾರತದಲ್ಲಿ ತನ್ನ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸುತ್ತಿರುವುದಾಗಿ ಅಂತಾರಾಷ್ಟ್ರೀಯ ಮಾನವಹಕ್ಕುಗಳ ಸಂಸ್ಥೆ -ಅಮ್ನೆಸ್ಟಿ ಇಂಟರ್ ನ್ಯಾಷನಲ್ ಮಂಗಳವಾರ ಪ್ರಕಟಿಸಿದೆ.

2020ರ ಸೆಪ್ಟಂಬರ್ 10ರಿಂದ ತನ್ನ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಸಂಪೂರ್ಣವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದು “ಆಕಸ್ಮಿಕವಲ್ಲ” ಎಂದು ಅದು ಹೇಳಿದೆ.

ತೀವ್ರ ನೋವು, ದುಃಖ ಹಾಗೂ ಭಾರವಾದ ಹೃದಯದಿಂದ ಈ ನಿರ್ಣಯ ಕೈಗೊಂಡಿದ್ದೇವೆ. ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತಾವು ಸಲ್ಲಿಸಿರುವ ವರದಿಗಳ ಹಿನ್ನೆಲೆಯಲ್ಲಿ ತಮ್ಮ ಸದಸ್ಯರು ಬೆದರಿಕೆ ಹಾಗೂ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಸಂಸ್ಥೆಯ ಹಿರಿಯ ಸಂಶೋಧನೆ, ನೀತಿ ನಿರ್ದೇಶಕ ರಜತ್ ಖೋಸ್ಲಾ ಹೇಳಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತಾವು ಎತ್ತಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಲು ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಮುಖವಾಗಿ ದೆಹಲಿ ಗಲಭೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗಳ ಬಗ್ಗೆ ಸರ್ಕಾರ ಮೌನವಹಿಸಿದೆ ಇಂತಹ ಸನ್ನಿವೇಶಗಳ ನಡುವೆ ಇನ್ನು ಮುಂದೆ ದೇಶದಲ್ಲಿ ಸೇವೆಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನಾವು 70 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತೇವೆ. ಇದಕ್ಕೂ ಮೊದಲು 2016 ರಲ್ಲಿ ರಷ್ಯಾದಲ್ಲಿ ಮಾತ್ರ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು ಎಂದು ಖೋಸ್ಲಾ ಹೇಳಿದ್ದಾರೆ. ಆದರೆ ಈ ಆರೋಪಗಳ ಬಗ್ಗೆ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group