ರಾಜ್ಯ ಸುದ್ದಿ

ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ; ತಕ್ಷಣ ಬಂದ್ ತೆರವುಗೊಳಿಸಿ; ಕಾರ್ಯನಿರತ ಪತ್ರಕರ್ತರ ಸಂಘ

ವರದಿಗಾರ (ಸೆ.29): ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ತಾವು ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

ಈ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಪವರ್ ಟಿವಿ ಮಾಲೀಕರ ಮೇಲೆ ಆರೋಪ ಇದ್ದರೆ ಅದು ಬೇರೆ ವಿಚಾರ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುದರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಕ್ಷಣ ಲೈವ್ ಬಂದ್ ತೆರವು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group