ವರದಿಗಾರ (ಸೆ.29): ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 19 ವರ್ಷದ ದಲಿತ ಮಹಿಳೆ ಮಂಗಳವಾರ ಬೆಳಿಗ್ಗೆ ಮೃತಪಟ್ಟ ನಂತರ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಟಿ ಕಂಗನಾ ರಾಣಾವತ್ ಕೂಡ ತನ್ನ ಟ್ವಿಟ್ಟರ್ ನಲ್ಲಿ ದಲಿತ ಬಾಲಕಿಯ ಹತ್ಯೆಗೆ ಕಿಡಿಕಾರಿದ್ದಾರೆ. ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು. ‘ನಾವು ನಮ್ಮ ಹೆಣ್ಣುಮಕ್ಕಳ ವಿಷಯದಲ್ಲಿ ವಿಫಲರಾಗಿದ್ದೇವೆ’ ಎಂದು ಬರೆದಿದ್ದಾರೆ.
”ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು. ಪ್ರತಿವರ್ಷ ಹೆಚ್ಚುತ್ತಿರುವ ಈ ಸಾಮೂಹಿಕ ಅತ್ಯಾಚಾರಗಳಿಗೆ ಏನು ಪರಿಹಾರ?. ಈ ದೇಶಕ್ಕೆ ಎಂತಹ ದುಃಖ ಮತ್ತು ಅವಮಾನಕರ ದಿನ. ನಮ್ಮ ಹೆಣ್ಣುಮಕ್ಕಳನ್ನು ನಾವು ದುರ್ಬಲಗೊಳಿಸಿದ್ದೇವೆ’ ಎಂದು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಮೇಲ್ವರ್ಗದ ನಾಲ್ವರ ತಂಡ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿತ್ತು. ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪರಿಣಾಮಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದರು.
