ರಾಜ್ಯ ಸುದ್ದಿ

ನವೆಂಬರ್ 3ರಂದು ಶಿರಾ, ರಾಜರಾಜೇಶ್ವರಿ ನಗರ ಉಪ ಚುನಾವಣೆ

ವರದಿಗಾರ (ಸೆ.29): ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ನ.3ರಂದು ಮತದಾನ ನಡೆಯಲಿದೆ.

ಮಂಗಳವಾರ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ಎರಡು ಕ್ಷೇತ್ರ ಸೇರಿ ದೇಶದ 56 ವಿಧಾನಸಭಾ ಕ್ಷೇತ್ರಗಳು, ಬಿಹಾರದ ಲೋಕಸಭೆಯ 1 ಕ್ಷೇತ್ರದ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದೆ.

ರಾಜ್ಯದ ಎರಡು ವಿಧಾನ ಸಭಾ ಕ್ಷೇತ್ರಗಳಾದ ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಕ್ಕೆ ನವೆಂಬರ್ 3ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಅಧಿಸೂಚನೆ ಹೊರಬೀಳಲಿದೆ. ಅ.16ಕ್ಕೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಅ.17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 19ಕ್ಕೆ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 3ರಂದು ರಾಜ್ಯ ಸೇರಿದಂತೆ 56 ಗಳ ಪೈಕಿ ಕೆಲವು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನ.10 ರಂದು ಮತ ಎಣಿಕೆ ನಡೆಯಲಿದೆ. ನ.12ಕ್ಕೆ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆಯಲ್ಲಿ ತಿಳಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group