“ಉತ್ತರ ಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ; ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ”
ವರದಿಗಾರ (ಸೆ.30): ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹರಿಹಾಯ್ದಿದಿದ್ದಾರೆ.
